For the best experience, open
https://m.newskannada.com
on your mobile browser.
Advertisement

ತೊಟ್ಟಂ: ಸ್ಟೀಫನ್ ರೊಡ್ರಿಗಸ್ ಅವರಿಗೆ ಗುರುದೀಕ್ಷೆ ಪ್ರದಾನ

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಗುರುವಾಗಿ ಸ್ಟೀಫನ್ ರೊಡ್ರಿಗಸ್ ಅವರಿಗೆ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರುದೀಕ್ಷೆಯನ್ನು ಪ್ರದಾನ ಮಾಡಿದರು.
01:17 PM May 01, 2024 IST | Chaitra Kulal
ತೊಟ್ಟಂ  ಸ್ಟೀಫನ್ ರೊಡ್ರಿಗಸ್ ಅವರಿಗೆ ಗುರುದೀಕ್ಷೆ ಪ್ರದಾನ

ಉಡುಪಿ: ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಗುರುವಾಗಿ ಸ್ಟೀಫನ್ ರೊಡ್ರಿಗಸ್ ಅವರಿಗೆ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಗುರುದೀಕ್ಷೆಯನ್ನು ಪ್ರದಾನ ಮಾಡಿದರು.

Advertisement

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಬಿಷಪ್ ಲೋಬೊ ಅವರು, ಕ್ರೈಸ್ತ ಧರ್ಮಗುರುವಿನ ಧಾರ್ಮಿಕ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ವಿವರಿಸಿದರು. ಧರ್ಮಪ್ರಾಂತ್ಯಕ್ಕೆ ಹೊಸ ಧರ್ಮಗುರುವನ್ನು ನೀಡಿದ ಕುಟುಂಬ ವರ್ಗವನ್ನು ಶ್ಲಾಘಿಸಿದರು. ಕ್ರೈಸ್ತ ಕುಟುಂಬಗಳಿಗೆ ಹೆಚ್ಚಿನ ಯುವಕರು ಧರ್ಮಗುರುಗಳಾಗಲು ಮುಂದೆ ಬರುವಂತೆ ತಮ್ಮ ಮಕ್ಕಳಿಗೆ ಪ್ರೋತ್ಸಾಹಿಸಲು ಪೋಷಕರಿಗೆ ಕರೆ ನೀಡಿದರು.

ಸಂಭ್ರಮದ ಬಲಿಪೂಜೆಯಲ್ಲಿ ಪವಿತ್ರಾತ್ಮನ ಆಗಮನಕ್ಕಾಗಿ ಧರ್ಮಾಧ್ಯಕ್ಷರ ಜೊತೆ ಸೇರಿದ ಎಲ್ಲಾ ಧರ್ಮಗುರುಗಳೂ ತಮ್ಮ ಕರಗಳನ್ನು ನವ ಧರ್ಮಗುರು ಅಭ್ಯರ್ಥಿಯ ಶಿರದ ಮೇಲಿಟ್ಟು ಪ್ರಾರ್ಥಿಸಿದರು. ನಂತರ ಕ್ರೈಸ್ತ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನವ ಧರ್ಮಗುರುವಿನ ಕರಗಳನ್ನು ಪವಿತ್ರ ತೈಲಗಳಿಂದ ಅಭಿಷಿಕ್ತಗೊಳಿಸದರು.

Advertisement

1

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ವಂದನೀಯ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂದನೀಯ ರೋಶನ್ ಡಿಸೋಜಾ, ಮಂಗಳೂರು ಜೆಪ್ಪು ಸಂತ ಜೋಸೆಫ್ ಗುರುಮಠದ ರೆಕ್ಟರ್ ವಂದನೀಯ ರೊನಾಲ್ಡ್ ಸೆರಾವೊ, ಕಲ್ಯಾಣಪುರ ವಲಯ ಪ್ರಧಾನ ಧರ್ಮಗುರು ವಂದನೀಯ ವಲೇರಿಯನ್ ಮೆಂಡೊನ್ಸಾ, ತೊಟ್ಟಂ ಚರ್ಚಿನ ಧರ್ಮಗುರು ವಂದನೀಯ ಡೆನಿಸ್ ಡೆಸಾ, ವಂದನೀಯ ಸ್ಟೇಫನ್ ಅವರ ಸಹೋದರ ವಂದನೀಯ ಮಾರ್ಟಿನ್ ರೊಡ್ರಿಗಸ್ ಹಾಗೂ 40ಕ್ಕೂ ಅಧಿಕ ಧರ್ಮಗುರುಗಳು ಗುರು ದೀಕ್ಷಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಗುರುದೀಕ್ಷೆಯ ಧಾರ್ಮಿಕ ವಿಧಿಯ ಕಾರ್ಯಕ್ರಮ ನಿರ್ವಹಣೆಯನ್ನು ವಂದನೀಯ ಸ್ಟೀಫನ್ ಡಿಸೋಜಾ ನೆರವೇರಿಸಿದರು. ಬಲಿಪೂಜೆಯ ಬಳಿಕ ಧರ್ಮಪ್ರಾಂತ್ಯ, ತೊಟ್ಟಂ ಸಂತ ಅನ್ನಮ್ಮ ಚರ್ಚು ಹಾಗೂ ಸಮನ್ವಯ ಸೌಹಾರ್ದ ಸಮಿತಿ ತೊಟ್ಟಂ ವತಿಯಿಂದ ನೂತನ ಧರ್ಮಗುರುಗಳಿಗೆ ಸನ್ಮಾನಿಸಲಾಯಿತು.

ವಂದನೀಯ ಸ್ಟೀಫನ್ ಅವರು ಶಿವಮೊಗ್ಗ ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣ ಜೋಗ್ ಫಾಲ್ಸ್ ಚರ್ಚಿನ ದಿವಂಗತ ಸಾಲ್ವದೊರ್ ಹಾಗೂ ದಿವಂಗತ ಝೀಟಾ ರೊಡ್ರಿಗಸ್ ಅವರ ಪುತ್ರರಾಗಿದ್ದು ಸಂತ ಫಿಲೋಮಿನಾ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣ ಪಡೆದು ಮಂಗಳೂರಿನಿ ಸಂತ ಜೊಸೇಫ್ ಗುರುಮಠದಲ್ಲಿ ಧಾರ್ಮಿಕ ಶಿಕ್ಷಣ ಪಡೆದು 2023 ಅಕ್ಟೋಬರ್ 14 ರಿಂದ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಡಿಕನ್ ಆಗಿ ತರಬೇತಿ ಪಡೆಯುತ್ತಿದ್ದರು.

Advertisement
Tags :
Advertisement