ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಶ್ಚಿಮ ಬಂಗಾಳ: ಬೃಹತ್ ಚಿಮಣಿ ಕುಸಿದು ಮೂವರು ಸಾವು

ಬೃಹತ್ ಚಿಮಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ  ನಡೆದಿದೆ.
10:40 AM Dec 14, 2023 IST | Ashika S

ಪಶ್ಚಿಮ ಬಂಗಾಳ: ಬೃಹತ್ ಚಿಮಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ  ನಡೆದಿದೆ.

Advertisement

ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸುಮಾರು 20 ಜನರು ಬಸಿರ್ಹತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಗಾಯಾಳುಗಳನ್ನು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Advertisement

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಬ್ಬರು ಸಾವನ್ನಪ್ಪಿದರೆ, ಇಬ್ಬರ ದೇಹ ಅವಶೇಷಗಳಡಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ.

Advertisement
Tags :
LatetsNewsNewsKannadaಇಟ್ಟಿಗೆಚಿಮಣಿಪಾರ್ಶ್ವಬೃಹತ್ಸಾವು
Advertisement
Next Article