ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.
09:45 PM Jan 28, 2024 IST | Ashika S

ಬೆಳ್ತಂಗಡಿ: ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

Advertisement

ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು.

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ.

Advertisement

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement
Tags :
LatetsNewsNewsKannadaಕಾರ್ಮಿಕಗೋದಾಮಿಪಟಾಕಿಸ್ಫೋಟ
Advertisement
Next Article