For the best experience, open
https://m.newskannada.com
on your mobile browser.
Advertisement

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
05:03 PM May 17, 2024 IST | Chaitra Kulal
ಈಜಲು ಹೋಗಿ‌ದ್ದ ಮೂವರು ನೀರುಪಾಲು  5 ಜನ ಪ್ರಾಣಾಪಾಯದಿಂದ ಪಾರು

ರಾಮನಗರ: ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

Advertisement

ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ. ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು.

ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬದುಕುಳಿದಿದ್ದಾರೆ.

Advertisement

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ  ಸಂಬಂಧ ಪ್ರಕರಣ ದಾಖಲಾಗಿದೆ.

Advertisement
Tags :
Advertisement