For the best experience, open
https://m.newskannada.com
on your mobile browser.
Advertisement

ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇವರು ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
11:19 AM Jan 13, 2024 IST | Gayathri SG
ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇವರು ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

Advertisement

ಸಾಧುಗಳು ಮಕರ ಸಂಕ್ರಾಂತಿ ಹಬ್ಬಕ್ಕಾಗಿ ಗಂಗಾಸಾಗರವನ್ನು ತಲುಪಲು ವಾಹನವನ್ನು ಬಾಡಿಗೆಗೆ ಪಡೆದಿದ್ದರು. ಅವರು ಮಾರ್ಗದ ಬಗ್ಗೆ ವಿಚಾರಿಸಿದಾಗ, ಕೆಲವು ಸ್ಥಳೀಯರು ಅನುಮಾನಗೊಂಡರು, ಇವರು ಅಪಹರಣಕಾರರು ಎಂದು ಆರೋಪಿಸಿ ಆಕ್ರೋಶಗೊಂಡು ಯುವಕರ ಗುಂಪೊಂದು ಸಾಧುಗಳ ಮೇಲೆ ಹಲ್ಲೆ ನಡೆಸಿದೆ.

ಈ ವೇಳೆ ಸ್ಥಳೀಯ ಪೊಲೀಸರು ಮಧ್ಯ ಪ್ರವೇಶಿಸಿ ಸಾಧುಗಳನ್ನು ರಕ್ಷಿಸಿ ಕಾಸಿಪುರ ಪೊಲೀಸ್ ಠಾಣೆಗೆ ಕರೆದೊಯ್ದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಪುರುಲಿಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಬ್ಯಾನರ್ಜಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement

Advertisement
Tags :
Advertisement