ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಮೃತ್ಯು

ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
02:58 PM Apr 25, 2024 IST | Chaitra Kulal

ಬೆಂಗಳೂರು: ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

Advertisement

ಮೃತ ಮೂವರು ಆಂಧ್ರ ಪ್ರದೇಶದ ಚಿತ್ತೂರು ಮೂಲದವರೆಂದು ಶಂಕಿಸಲಾಗಿದೆ. ಶಶಿಕುಮಾರ್(23) ಲೋಕೇಶ್ (25) ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಸಾವನ್ನಪ್ಪಿದ ಮೂವರು ಯುವಕರು 25 ವಯಸ್ಸಿನವರಾಗಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮೂವರು ಯುವಕರು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಿದ್ದರು. ಆದರೆ ರೈಲ್ವೇ ಆ್ಯಕ್ಸಿಡೆಂಟ್‌ನಲ್ಲಿ ಮೂವರು ಸಾವನ್ನಪ್ಪಿರಬಹುದು ಎನ್ನಲಾಗಿದೆ.

Advertisement

ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ರೈಲು ಹೋಗುವಾಗ ಟ್ರ್ಯಾಕ್ ಪಕ್ಕ ಮೂವರು ನಡೆದುಕೊಂಡು ಹೋಗಿದ್ದಾರೆ. ಈ ಟ್ರ್ಯಾಕ್‌ ಅಕ್ಕ ಪಕ್ಕ ಅಪಾರ್ಟ್‌ಮೆಂಟ್ ಇರುವ ಹಿನ್ನೆಲೆ ಸ್ಥಳಾವಕಾಶ ಕಿರಿದಾಗಿದೆ. ಅದು ನಿಷೇಧಿತ ಪ್ರದೇಶವಾಗಿದ್ದು ಅಲ್ಲಿ ನಡೆದುಕೊಂಡು ಹೋಗಿದ್ದಾರೆ. ಈ ವೇಳೆ ರೈಲು ಡಿಕ್ಕಿ ಹೊಡೆದು ಮೂರು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕಣ್ಣೂರು – ಯಶವಂತಪುರ ಎಕ್ಸ್‌ಪ್ರೆಸ್‌ಗೆ ಅಡ್ಡಲಾಗಿ ಸಿಕ್ಕಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಯುವಕರಿಗೆ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾದ ಬಳಿಕ ಮುಂದಿನ ಸ್ಟೇಷನ್‌ಗೆ ಟ್ರೈನ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬಳಿಕ ರೈಲ್ವೆ ಪೊಲೀಸರು ಹೋಗಿ ಪರಿಶೀಲನೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ

Advertisement
Tags :
BANGALOREdeathImpactLatestNewsNewsKarnatakaPOLICE
Advertisement
Next Article