For the best experience, open
https://m.newskannada.com
on your mobile browser.
Advertisement

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
06:58 AM May 04, 2024 IST | Chaitra Kulal
ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ  ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಮಲೆನಾಡು ಮತ್ತು ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗಬಹುದು. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

Advertisement

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯು ಅಬ್ಬರಿಸಲಿದ್ದರೆ, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಪ್ರಮುಖವಾಗಿ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿ ಕೊಪ್ಪಳ, ಕಲಬುರಗಿ,

ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Advertisement
Tags :
Advertisement