For the best experience, open
https://m.newskannada.com
on your mobile browser.
Advertisement

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ
06:40 AM May 07, 2024 IST | Nisarga K
ಇಂದು 2ನೇ ಹಂತದ ಮತದಾನ   ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ
ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಬೆಂಗಳೂರು: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Advertisement

ಹೇಗೆ ನೋಡುವುದು?
ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ
ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

Advertisement

Advertisement
Tags :
Advertisement