For the best experience, open
https://m.newskannada.com
on your mobile browser.
Advertisement

ಇಂದು ಭಾರತ-ಆಸ್ಟ್ರೇಲಿಯಾ ಮಹಿಳಾ ತಂಡಗಳ ಮೊದಲ ಏಕದಿನ ಪಂದ್ಯ

ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂದು ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನುಎದುರಿಸಲಿದೆ.
12:40 PM Dec 28, 2023 IST | Ashitha S
ಇಂದು ಭಾರತ ಆಸ್ಟ್ರೇಲಿಯಾ ಮಹಿಳಾ ತಂಡಗಳ ಮೊದಲ ಏಕದಿನ ಪಂದ್ಯ

ಮುಂಬೈ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂದು ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾವನ್ನುಎದುರಿಸಲಿದೆ.

Advertisement

ಸರಣಿಯ ಆರಂಭಿಕ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಕಳೆದ ವಾರ ಇದೇ ಮೈದಾನದಲ್ಲಿ ನಡೆದ ಏಕೈಕ ಟೆಸ್ಟ್‌ನಲ್ಲಿ ಭಾರತವು ಕಾಂಗರೂ ಪಡೆಯನ್ನು ಎದುರಿಸಿತು ಮತ್ತು ಎಂಟು ವಿಕೆಟ್‌ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿತು. ವುಮೆನ್ ಇನ್ ಬ್ಲೂ ಏಕದಿನದಲ್ಲಿ ಅದೇ ಪ್ರದರ್ಶನವನ್ನು ಮುಂದುವರೆಸುವ ತವಕದಲ್ಲಿದೆ.

ಭಾರತ vs ಆಸ್ಟ್ರೇಲಿಯಾ ಮೊದಲ ಮಹಿಳಾ ಏಕದಿನ 1:30 PM IST ಕ್ಕೆ ಆರಂಭವಾಗಲಿದೆ. ಇನ್ನು ಭಾರತದಲ್ಲಿ Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ.ಲೈವ್ ಸ್ಟ್ರೀಮಿಂಗ್ JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

Advertisement

ಉಭಯ ತಂಡಗಳು
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್.

ಆಸ್ಟ್ರೇಲಿಯಾ: ಡಾರ್ಸಿ ಬ್ರೌನ್, ಹೀದರ್ ಗ್ರಹಾಂ, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಅಲಿಸ್ಸಾ ಹೀಲಿ (ನಾಯಕಿ- ವಿಕೆಟ್ ಕೀಪರ್), ಜೆಸ್ ಜೊನಾಸೆನ್, ಅಲಾನಾ ಕಿಂಗ್, ಫೋಬೆ ಲಿಚ್‌ಫೀಲ್ಡ್, ತಾಲಿಯಾ ಮೆಕ್‌ಗ್ರಾತ್, ಬೆತ್ ಮೂನಿ (ವಿಕೆಟ್ ಕೀಪರ್), ಎಲ್ಲಿಸ್ ಪೆರ್ರಿ, ಮೇಗನ್ ಶುಟ್, ಜಾರ್ಜಿಯಾ ವೇರ್‌ಹ್ಯಾಮ್.

Advertisement
Tags :
Advertisement