For the best experience, open
https://m.newskannada.com
on your mobile browser.
Advertisement

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸಲಾಗುತ್ತದೆ.
07:20 AM Apr 30, 2024 IST | Chaitra Kulal
ಇಂದು  ಏಪ್ರಿಲ್ 30  ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸಲಾಗುತ್ತದೆ.

Advertisement

ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ ಎಂದು ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ.

ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ ಮಾಡಿದ್ದು ಈ ಮೂಲಕ ಸರ್ಕಾರಿ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆಯು ಲಕ್ಷಾಂತರ ನಾಗರಿಕರಿಗೆ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ಉಚಿತವಾಗಿ ಹೆಚ್ಚು ಸುಲಭವಾಗಿ ಸಿಗುವಂತೆ ಮಾಡುವ ಗುರಿಯನ್ನು ಹೊಂದಿದೆ.

Advertisement

ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಘೋಷಿಸಿದರು. ಇದು ಎರಡು ಮುಖ್ಯ ಸ್ತಂಭಗಳನ್ನು ಹೊಂದಿದ್ದು, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಜನರ ಮನೆಗಳಿಗೆ ಹತ್ತಿರ ತರುವ ಗುರಿಯನ್ನು ಹೊಂದಿವೆ.

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಇದು ಆರೋಗ್ಯ ವಿಮಾ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ನಗದು ರಹಿತ ಮತ್ತು ಕೈಗೆಟುಕುವ ವೈದ್ಯಕೀಯ ರಕ್ಷಣೆಯನ್ನು ನೀಡುವ ಉದ್ದೇಶ ಹೊಂದಿದೆ.

ಆಯುಷ್ಮಾನ್ ಭಾರತ್ ದಿವಸ್‌ನ ಮಹತ್ವ: ಆಯುಷ್ಮಾನ್ ಭಾರತ್ ಯೋಜನೆಯ ಗುರಿ ಮತ್ತು ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತದೆ. ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಮಾಡಿದ ದೊಡ್ಡ ಆರೋಗ್ಯ ಯೋಜನೆಯಾಗಿದೆ.

ಈ ಯೋಜನೆಯು ಭಾರತದಲ್ಲಿ 10 ಕೋಟಿಗೂ ಹೆಚ್ಚು ಬಡ ಮತ್ತು ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ. ಅರ್ಹ ಕುಟುಂಬಗಳು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವರ್ಷಕ್ಕೆ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು.

Advertisement
Tags :
Advertisement