ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಆರ್​​ಸಿಬಿ-ಮುಂಬೈಗೆ ಮಾಡು ಇಲ್ಲವೇ ಮಡಿ ಪಂದ್ಯ: ಆರ್​​ಸಿಬಿಯ ಸ್ಟಾರ್ ಆಟಗಾರ ಔಟ್

ಐಪಿಎಲ್ 17ನೇ ಸೀಸನ್​ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.
01:20 PM Apr 11, 2024 IST | Ashitha S

ಮುಂಬೈ: ಐಪಿಎಲ್ 17ನೇ ಸೀಸನ್​ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.

Advertisement

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಲೀಗ್​ನಲ್ಲಿ ಏಕೈಕ ಗೆಲುವು ದಾಖಲಿಸಿದ್ದರೆ, ತನ್ನ ಆರ್​ಸಿಬಿ ಕೂಡ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿದೆ. ಇದು ಮುಂಬೈಗೆ ನಾಲ್ಕನೇ ಪಂದ್ಯವಾಗಿದ್ದು, ಬೆಂಗಳೂರು ತಂಡಕ್ಕೆ ಆರನೇ ಪಂದ್ಯವಾಗಿದೆ.

ಮುಂಬೈ 4 ಪಂದ್ಯಗಳಲ್ಲಿ 1 ರಲ್ಲಿ ಗೆದ್ದಿದ್ದರೆ, ಬೆಂಗಳೂರು ಐದರಲ್ಲಿ 1 ಬಾರಿ ಗೆಲುವಿನ ರುಚಿ ಕಂಡಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ. ಇಂದು ಗೆದ್ದ ತಂಡಕ್ಕೆ ಎರಡು ಅಂಕ ಸಿಗಲಿದೆ. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರೋ ಆರ್​​ಸಿಬಿಗೆ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಆರ್​ಸಿಬಿಯಲ್ಲಿ ಕೆಲವೇ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಕಾರಣಕ್ಕೆ ಎರಡು ವಿದೇಶಿ ಆಟಗಾರರಿಗೆ ಬೇಂಚ್ ಕಾಯಿಸುವ ಕೆಲಸ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ.

Advertisement

ವಿರಾಟ್ ಕೊಹ್ಲಿ ಮಾತ್ರ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ವಿದೇಶಿ ಆಟಗಾರರಾದ ಮ್ಯಾಕ್ಸ್​ವೆಲ್ ಹಾಗೂ ಕ್ಯಾಮರೂನ್ ಗ್ರೀನ್ ಸಂಪೂರ್ಣ ವಿಫಲತೆ ಕಂಡಿದ್ದಾರೆ. ಹಾಗಾಗಿ ಇಂದಿನ ಪಂದ್ಯಕ್ಕೆ ಮ್ಯಾಕ್ಸ್​ವೆಲ್ ಬದಲು ವಿಲ್ ಜಾಕ್ಸ್ ಬರೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಪಂದ್ಯ ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಟಾಸ್ 7 ಗಂಟೆಗೆ ನಡೆಯಲಿದೆ.

Advertisement
Tags :
indiaIPLKARNATAKANewsKarnatakasportsvirat kohliಆರ್​ಸಿಬಿಮುಂಬೈ
Advertisement
Next Article