ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರೈಲ್ವೇಯ 9,000 ಹುದ್ದೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

ದೇಶದಲ್ಲಿ ಅತೀ ಹೆಚ್ಚು ಉದ್ಯೋಗ ಒದಗಿಸುವ ಸಂಸ್ಥೆಗಳಲ್ಲಿ ಭಾರತೀಯ ರೈಲ್ವೇಯೂ ಒಂದಾಗಿದೆ. ಇದೀಗ ರೈಲ್ವೇ ನೇಮಕಾತಿ ಮಂಡಳಿ ದೇಶಾದ್ಯಂತ ಇರುವ ಬರೋಬ್ಬರಿ 9,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಟೆಕ್ನಿಷಿಯನ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 9ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 8 ನಾಳೆ ಕೊನೆ ದಿನವಾಗಿದೆ. 
04:55 PM Apr 07, 2024 IST | Chaitra Kulal

ಬೆಂಗಳೂರು: ದೇಶದಲ್ಲಿ ಅತೀ ಹೆಚ್ಚು ಉದ್ಯೋಗ ಒದಗಿಸುವ ಸಂಸ್ಥೆಗಳಲ್ಲಿ ಭಾರತೀಯ ರೈಲ್ವೇಯೂ ಒಂದಾಗಿದೆ. ಇದೀಗ ರೈಲ್ವೇ ನೇಮಕಾತಿ ಮಂಡಳಿ ದೇಶಾದ್ಯಂತ ಇರುವ ಬರೋಬ್ಬರಿ 9,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಟೆಕ್ನಿಷಿಯನ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 9ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 8 ನಾಳೆ ಕೊನೆ ದಿನವಾಗಿದೆ.

Advertisement

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:
ಟೆಕ್ನಿಷಿಯನ್‌ ಗ್ರೇಡ್‌-I ಸಿಗ್ನಲ್‌ - 1,100 ಹುದ್ದೆ ಮತ್ತು ಟೆಕ್ನಿಷಿಯನ್‌ ಗ್ರೇಡ್‌- III ಸಿಗ್ನಲ್‌ -7,900 ಹುದ್ದೆಗಳಿವೆ. ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಡಿಪ್ಲೋಮಾ ತೇರ್ಗಡೆಯಾಗಿರಬೇಕು ಅಥವಾ ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಯೋಧರು ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

Advertisement

ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ, ಮಾಜಿ ಯೋಧರು, ಪಿಡಬ್ಲ್ಯುಬಿಡಿ, ಮಹಿಳೆಯರು, ತೃತೀಯ ಲಿಂಗಿಗಳು, ಆರ್ಥಿಕವಾಗಿ ದುರ್ಬಲರಾಗಿರುವವರು 250 ರೂ. ಮತ್ತು ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಸ್ಟೇಜ್‌ -I, II ನಡೆಯಲಿದೆ. ಬಳಿಕ ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಆಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಿಬಿಟಿ I ಆನ್‌ಲೈನ್‌ ಪರೀಕ್ಷೆಯಾಗಿದ್ದು ಇದರಲ್ಲಿ ಸಾಮಾನ್ಯ ಜ್ಞಾನ, ಗಣಿತ, ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

ಸಿಬಿಟಿ IIರಲ್ಲಿ ಸಾಮಾನ್ಯ ಜ್ಞಾನ, ಗಣಿತ, ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳ ಜತೆಗೆ ನಿಮ್ಮ ಟೆಕ್ನಿಕಲ್‌ ಜ್ಞಾನವನ್ನೂ ಪರೀಕ್ಷಿಸಲಾಗುತ್ತದೆ. ಈ ಎರಡೂ ಹಂತಗಳನ್ನು ದಾಟಿದವರ ಪ್ರಮಾಣ ಪತ್ರವನ್ನು ವಿವರವಾಗಿ ಪರಿಶೀಲಿಸಲಾಗುತ್ತದೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ಟೆಕ್ನೀಷಿಯನ್‌ ಗ್ರೇಡ್‌ 1 ಸಿಗ್ನಲ್‌-29,200 ರೂ. ಮತ್ತು ಟೆಕ್ನೀಷಿಯನ್‌ ಗ್ರೇಡ್‌ 3 ಸಿಗ್ನಲ್‌-19,900 ರೂ. ಮಾಸಿಕ ವೇತನ ದೊರೆಯಲಿದೆ.

Advertisement
Tags :
applicationDesignationLatestNewsNewsKarnatakaONLINERAILWAYಬೆಂಗಳೂರು
Advertisement
Next Article