ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂಬೈ ನಗರದ 6 ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟದ ಬೆದರಿಕೆ: ಕಟ್ಟೆಚ್ಚರ

ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.
10:41 AM Feb 02, 2024 IST | Ashitha S
ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಇಂದು(ಫೆ.02) ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.
Advertisement

ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಮಾಹಿತಿ ರವಾನೆಯಾಗಿದ್ದು, ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ. ಬಾಂಬ್ ಪತ್ತೆ ಮತ್ತು ವಿಲೇವಾರಿ ಪತ್ತೆ ದಳ(BDDS) ಮತ್ತು ಶ್ವಾನದಳ ಕೂಡಲೇ ಸ್ಥಳಗಳಿಗೆ ತೆರಳಿ ತೀವ್ರ ತಪಾಸಣೆ ನಡೆಸಿದ್ದು ಯಾವುದೇ ಬಾಂಬ್ ಇಟ್ಟಿರುವುದು ಪತ್ತೆಯಾಗಿಲ್ಲ. ಪೊಲೀಸರು ಅಪರಿಚಿತರ ಮೇಲೆ ಕೇಸು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Advertisement
Tags :
BDDSindiaLatestNewsNewsKannadaನವದೆಹಲಿಬಾಂಬ್ ಸ್ಫೋಟಮುಂಬೈ
Advertisement
Next Article