For the best experience, open
https://m.newskannada.com
on your mobile browser.
Advertisement

ಸುಳ್ಯ: ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
06:58 PM Feb 07, 2024 IST | Ashitha S
ಸುಳ್ಯ  ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

Advertisement

ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು.ಮೃತರು ಪತ್ನಿ ಗೀತಾ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Advertisement
Tags :
Advertisement