ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೈಕ್ಲೋನ್​​​ ಎಫೆಕ್ಟ್: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಇಂದಿನಿಂದ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
10:14 PM Dec 05, 2023 IST | Ashitha S

ಬೆಂಗಳೂರು: ಇಂದಿನಿಂದ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೈಚುಂಗ್ ಚಂಡಮಾರುತದ ಪರಿಣಾಮ ತಮಿಳುನಾಡಲ್ಲಿ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಗಂಟೆಗೆ 100 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರದಲ್ಲೂ ಸಹ ಮಳೆ ಆಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ಅಲ್ಲದೇ ಮೈಚಾಂಗ್ ಸೈಕ್ಲೋನ್ ಅಬ್ಬರದಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಜನರು ಸಮುದ್ರಕ್ಕೆ ಇಳಿಯದಂತೆ ಸರ್ಕಾರ ಸೂಚನೆ ಕೊಟ್ಟಿದೆ.

Advertisement
Tags :
GOVERNMENTIMDindiaKARNATAKALatestNewsNewsKannadaಬೆಂಗಳೂರು
Advertisement
Next Article