ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಿರ್ಭಯಾ ಪ್ರಕರಣ ನೆನಪಿಸುವಂತಿದೆ ಈ ಘೋರ ದುರಂತ !

ಚಲಿಸುತ್ತಿದ್ದ ಬಸ್ ನಲ್ಲಿ ಬಾಲಕಿ ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಇದು ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಿದೆ.
01:43 PM Dec 17, 2023 IST | Ashitha S

ರಾಜಸ್ಥಾನ : ಚಲಿಸುತ್ತಿದ್ದ ಬಸ್ ನಲ್ಲಿ  19 ವರ್ಷದ ಯುವತಿ ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಇದು ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ನೆನಪಿಸುವಂತಿದೆ.

Advertisement

ಡಿ. 9 ಮತ್ತು 10 ರ ಮಧ್ಯರಾತ್ರಿ ರಾಜಸ್ತಾನದ ಕಾನ್ಪುರದಿಂದ ಜೈಪುರಕ್ಕೆ ಹೋಗುತ್ತಿದ್ದ ಯುವತಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.

ಸಂತ್ರಸ್ತ ಯುವತಿ ತನ್ನ ಚಿಕ್ಕಪ್ಪನ ಮನೆಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದಳು. ಬಸ್ ಏರಿದ ಸಂತ್ರಸ್ತೆಗೆ ಹೆಣ್ಣು ಮಗಳಿಗೆ ಯಾವುದೇ ಸೀಟುಗಳು ಸಿಗದ ಕಾರಣ, ಅವಳನ್ನು ಕ್ಯಾಬಿನ್ ಮೇಲೆ ಕುಳಿತುಕೊಳ್ಳುವಂತೆ ತಿಳಿಸಿದ್ದಾರೆ. ಅದರಂತೆ  ಯುವತಿ ಕ್ಯಾಬಿನ್ ಮೇಲೆ ಕುಳಿತಿದ್ದಳು.

Advertisement

ಪ್ರಯಾಣದ ಸಮಯದಲ್ಲಿ, ಕ್ಯಾಬಿನ್‌ನಲ್ಲಿದ್ದ ಇತರ ಪ್ರಯಾಣಿಕರು ಹೊರಟು ಹೋದ ಬಳಿಕ ಮಧ್ಯರಾತ್ರಿ ಕಾಮುಕರು ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಸ್ಸಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಫೂಲ್‌ಚಂದ್ ಮೀನಾ ಘಟನೆಯ ಕುರಿತು ತಿಳಿಸಿದ್ದಾರೆ.

ಇನ್ನು ಉಳಿದಿದ್ದ ಪ್ರಯಾಣಿಕರು ಕ್ಯಾಬಿನ್ ಬಾಗಿಲು ತೆರೆದು ನೋಡಿದಾಗ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಚಾಲಕನ್ನು ಹಿಡಿದು ಥಳಿಸಿದ್ದಾರೆ. ಇಬ್ಬರು ಚಾಲಕರ ಪೈಕಿ ಒಬ್ಬ ತಪ್ಪಿಸಿಕೊಂಡಿದ್ದಾನೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement
Tags :
crimeGANGRAPEindiaLatestNewsNewsKannadaPOLICEನವದೆಹಲಿ
Advertisement
Next Article