ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
04:31 PM Jan 08, 2024 IST | Ashika S

ತುಮಕೂರು: ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಚನ್ನಪಟ್ಟಣ ಮೂಲದ ಅಮಾನುತುಲ್ಲಾ ಖಾನ್ (60), ಮುನಾವರ್ (50) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಈ ಇಬ್ಬರು ಬೈಕ್ ಸವಾರರು ಕಳೆದ ರಾತ್ರಿ ಹುಲಿಯೂರು ದುರ್ಗದ ಕಡೆಯಿಂದ ಚನ್ನಪಟ್ಟಣದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ರಸ್ತೆಯಲ್ಲಿ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatestNewsNewsKannadaಅಪರಿಚಿತ ವಾಹನಡಿಕ್ಕಿತುಮಕೂರುಬೈಕ್ಮೃತಹುಲಿಯೂರು ದುರ್ಗ
Advertisement
Next Article