ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಿ.ಎಚ್.ಡಿ‌ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಸುರತ್ಕಲ್ ಬಳಿ ದ್ವಿಚಕ್ರ ವಾಹನ ಪತ್ತೆ

ಪಿ.ಎಚ್.ಡಿ‌ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಉಳ್ಳಾಲ ಪೊಲೀಸರಿಗೆ ಚೈತ್ರಾಳ ದ್ವಿಚಕ್ರ ವಾಹನ ಸುರತ್ಕಲ್ ಬಳಿ ಪತ್ತೆಯಾಗಿದೆ.
01:57 PM Feb 25, 2024 IST | Gayathri SG

ಮಂಗಳೂರು: ಪಿ.ಎಚ್.ಡಿ‌ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಉಳ್ಳಾಲ ಪೊಲೀಸರಿಗೆ ಚೈತ್ರಾಳ ದ್ವಿಚಕ್ರ ವಾಹನ ಸುರತ್ಕಲ್ ಬಳಿ ಪತ್ತೆಯಾಗಿದೆ.

Advertisement

ಚೈತ್ರಾ ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದು ಮೊಬೈಲ್ ಪಂಪ್ ವೆಲ್ ಬಳಿ ಸ್ವಿಚ್ಡ್ ಆಫ್ ಆಗಿತ್ತು. ಸದ್ಯ, ಚೈತ್ರಾ ಕೇರಳ ಅಥವಾ ಬೆಂಗಳೂರು ಕಡೆ ಇರುವ ಅನುಮಾನ ವ್ಯಕ್ತವಾಗಿದೆ. ಇನ್ನೊಂದೆಡೆ, ಡ್ರಗ್ ಪ್ರಕರಣದಲ್ಲಿ ಭಾಗಿಯಾಗಿರುವ ಶಾರೂಕ್ ಮೊಬೈಲ್ ಕೂಡ ಸ್ವಿಚ್ಡ್​ ಆಫ್ ಆಗಿರುವ ಕಾರಣ ಲವ್​ಜಿಹಾದ್ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಬಗ್ಗೆ ಮಾತನಾಡಿದ ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸನ್ನು ಸರ್ಕಾರ ಮತ್ತು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಸುಸಂಸ್ಕೃತ ಮನೆಯ ಹುಡುಗಿಯನ್ನ ಬ್ಲ್ಯಾಕ್ ಮೇಲ್ ಹಾಗೂ ವಂಚಿಸಿ ಅಪಹರಣ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.

Advertisement

ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರ್ ಈ ಬಗ್ಗೆ  ಮಾತನಾಡಿದ್ದು, ಹುಡುಗರು ರಾತ್ರಿ ಹೊತ್ತು ಪಿಜಿ ಬಳಿ‌ ಬರುತ್ತಿರುವ ಬಗ್ಗೆ 10 ದಿನದ ಹಿಂದೆ ಸ್ಥಳಯರಿಂದ ಮಾಹಿತಿ ಬಂದಿತ್ತು. ಚೈತ್ರಾ ಹೆಬ್ಬಾರ್ ಪ್ರತಿಷ್ಟಿತ ಕುಟುಂಬಕ್ಕೆ ಸೇರಿದವಳು. ಈಕೆಗೆ ಶಾರೂಕ್ ಎಂಬ ಯುವಕನ ಜೊತೆ ನಿಕಟ ಸಂಪರ್ಕ ಇತ್ತು. ಶಾರೂಕ್ ಗಾಂಜಾ ಡ್ರಗ್ ಮಾಫಿಯಾದಲ್ಲಿ ಸಿಕ್ಕಿ ಹಾಕಿಕೊಂಡವ. ಡ್ರಗ್ಸ್​‌ನ ಆಸೆ ಆಮೀಷ ತೋರಿಸಿ ಬ್ರೈನ್ ವಾಶ್ ಮಾಡಿದ್ದಾನೆ. ಇದು ಲವ್ ಜಿಹಾದ್ ದೊಡ್ಡ ಷಡ್ಯಂತ್ರ ಇದೆ ಎಂದಿದ್ದಾರೆ.

Advertisement
Tags :
LatestNewsNewsKannadaಮಂಗಳೂರುವಿದ್ಯಾರ್ಥಿನಿ
Advertisement
Next Article