For the best experience, open
https://m.newskannada.com
on your mobile browser.
Advertisement

ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.
01:06 PM Mar 15, 2024 IST | Gayathri SG
ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.

Advertisement

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ, ಪ್ರಮೋದ್ ಮಧ್ವರಾಜ್ ಪ್ರಮುಖ ಆಕ್ಷಾಂಕಿಗಳಾಗಿದ್ದರು. ಆದರೆ, ಅಚ್ಚರಿಯ ಬೆಳವಣಿಗೆಯಲ್ಲಿ ಕೋಟ ಹೆಸರು ಅಂತಿಮ ಆಗಿದ್ದು, ಕೋಟ ಅವರು ಕ್ಷೇತ್ರದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ.

ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ ಬಾರಿ ಮತ್ತೊಮ್ಮೆ ದಾಖಲೆಯ ಅಂತರದಿಂದ ಗೆಲುವು ಸಾಧಿಸುವಲ್ಲಿ ಸಹಕಾರ ನೀಡುವ ಭರವಸೆ ನೀಡಿದರು ಎಂದಿದ್ದಾರೆ.

Advertisement

Advertisement
Tags :
Advertisement