ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಳೆಯಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ : ಯಶ್ ಪಾಲ್

ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
05:07 PM Apr 16, 2024 IST | Chaitra Kulal

ಉಡುಪಿ: ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

Advertisement

ಈ ಹಿಂದಿನ ರಾಷ್ಟೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಿಂದ ನಿತ್ಯ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆಯವರು ಆದ್ಯತೆಯ ಮೇರೆಗೆ ಅಂಡರ್ ಪಾಸ್ ಕಾಮಗಾರಿ ಮಂಜೂರು ಮಾಡಿ ಇದೀಗ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.

ಅಂಡರ್ ಪಾಸ್ ರಸ್ತೆಯಿಂದ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಸಮಸ್ಯೆ ಪರಿಹಾರವಾಗಲಿದ್ದು, ಶೀಘ್ರದಲ್ಲೇ ಇನ್ನೊಂದು ಭಾಗದ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
LatestNewsNewsKarnatakaYash Pal Suvarnaಉಡುಪಿಕಾಮಗಾರಿ
Advertisement
Next Article