ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಉಗ್ರ ದಾಳಿಯ 34 ವರ್ಷಗಳ ಬಳಿಕ ತೆರೆಯಿತು ಉಮಾ ಭಗವತಿ ದೇವಸ್ಥಾನ

1990ರಲ್ಲಿ ಉಗ್ರಗಾಮಿಗಳ ದಾಳಿಗೆ ತುತ್ತಾಗಿ ಹಾಳಾಗಿದ್ದ ಪುರಾತನ ಕಾಲದ ಉಮಾ ಭಗವತಿ ದೇವಸ್ಥಾನ ಬರೊಬ್ಬರಿ 34 ವರ್ಷಗಳ ಬಳಿಕ ಭಕ್ತರ ಸೇವೆಗೆ ಮತ್ತೆ ತೆರೆದುಕೊಂಡಿದೆ.
05:14 PM Jul 16, 2024 IST | Ashitha S

ಅನಂತನಾಗ್: 1990ರಲ್ಲಿ ಉಗ್ರಗಾಮಿಗಳ ದಾಳಿಗೆ ತುತ್ತಾಗಿ ಹಾಳಾಗಿದ್ದ ಪುರಾತನ ಕಾಲದ ಉಮಾ ಭಗವತಿ ದೇವಸ್ಥಾನ ಬರೊಬ್ಬರಿ 34 ವರ್ಷಗಳ ಬಳಿಕ ಭಕ್ತರ ಸೇವೆಗೆ ಮತ್ತೆ ತೆರೆದುಕೊಂಡಿದೆ.

Advertisement

ಅನಂತನಾಗ್‌ನಲ್ಲಿರುವ ಉಮಾ ಭಗವತಿ ದೇವಾಲಯ ಹಿಂದೂಗಳ ಪಾಲಿಗೆ ಬಹಳ ವಿಶೇಷವಾದ ದೇವಸ್ಥಾನವಾಗಿದ್ದು, ಕಳೆದ 34 ವರ್ಷಗಳ ಕಾಲ ಮುಚ್ಚಲ್ಪಟ್ಟ ಈ ಪವಿತ್ರ ದೇವಾಲಯವು ಕೊನೆಗೂ ಭಕ್ತರಿಗೆ ತನ್ನ ಬಾಗಿಲುಗಳನ್ನು ತೆರೆದಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಾಂಗಾಸ್ ಗ್ರಾಮದಲ್ಲಿ ರಾಗ್ನ್ಯಾ ದೇವಿ ದೇವಸ್ಥಾನ ಎಂದೂ ಕರೆಯಲ್ಪಡುವ ಉಮಾ ಭಗವತಿ ದೇವಸ್ಥಾನವಿದೆ. ಇದು ಪಾರ್ವತಿ ದೇವಿಯ ಅವತಾರವಾದ ಉಮಾ ದೇವಿಗೆ ಸಮರ್ಪಿತವಾದ ದೇವಸ್ಥಾನವಾಗಿದ್ದು, ಈ ದೇವಾಲಯವು 500 ವರ್ಷಗಳಿಗಿಂತಲೂ ಹಳೆಯದು ಎಂದು ಹೇಳಲಾಗುತ್ತದೆ.

Advertisement

ಇಂತಹ ಇತಿಹಾಸ ಪ್ರಸಿದ್ಧ ದೇಗುಲವನ್ನು ಬರೊಬ್ಬರಿ 3 ದಶಕಗಳ ನಂತರ ಈ ದೇವಾಲಯವು ಪುನರಾರಂಭಗೊಂಡಿದ್ದು, ಸ್ಥಳೀಯರು ಮತ್ತು ಭಕ್ತರಲ್ಲಿ ಅಪಾರ ಸಂತೋಷ ಮತ್ತು ಉತ್ಸಾಹವನ್ನು ತಂದಿದೆ.

 

Advertisement
Tags :
AnantnagLATEST NEWSNews KarnatakaRajasthanTODAYUma Bhagwati
Advertisement
Next Article