ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.
11:32 AM Dec 11, 2023 IST | Ashika S

ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

Advertisement

ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮಾದಿಗ ದಂಡೋರ ಸಮಿತಿ ಸದಸ್ಯರು ಮೂರು ಬಸ್​ಗಳಲ್ಲಿ ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದಾಗ ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisement

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Tags :
LatetsNewsNewsKannadaಅಧಿವೇಶನಬಸ್ಬೆಳಗಾವಿವಾಹನಸುವರ್ಣಸೌಧ
Advertisement
Next Article