ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಆದ್ರೆ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ 2 ಸಲಹೆಗಳಿಗೆ ಪ್ರಧಾನಿ ನರೇಂದ್ರ ಮೋದಿ , ಅವರ ಕಚೇರಿ ಹಾಗೂ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನಿರಾಕರಿಸಿದೆ.
09:24 PM Dec 11, 2023 IST | Umesha HS

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮಿ ಸಂಬಂಧಗಳು ಮತ್ತು ವ್ಯಭಿಚಾರ ಸೇರಿಸುವ ಸಮಿತಿ ಶಿಫಾರಸಿಗೆ ಅಸಮ್ಮತಿ ಸೂಚಿಸಿದೆ. ಏಕೆಂದರೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದ ಎರಡೂ ಕಾನೂನು ಸಲಹೆಗಳು ದೂರಗಾಮಿ ಪರಿಣಾಮ ಉಂಟು ಮಾಡಲಿದೆ. ಜೊತೆಗೆ ಸುಪ್ರೀಂ ಕೋರ್ಟ್‌ಗೆ ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿವೆ ಎಂಬ ಕಾರಣಕ್ಕಾಗಿ ಒಪ್ಪಿಗೆ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ಸಲಹೆಗಳ ಪೈಕಿ ಒಂದು ವ್ಯಭಿಚಾರದ ಅಪರಾಧಕ್ಕೆ ಸಂಬಂಧಿಸಿದ್ದಾಗಿದ್ದರೆ, ಇನ್ನೊಂದು ಸಲಿಂಗ ಕಾಮ ಅಪರಾಧ ಎಂದು ಪರಿಣಿಸುವುದಾಗಿದೆ. 2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದ್ರೆ 2018 ರಲ್ಲಿ ಸುಪ್ರೀಂ ಕೋರ್ಟ್ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದನ್ನ ತಳ್ಳಿಹಾಕಿದೆ, ಇದು ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ. ಮಾತ್ರವಲ್ಲದೇ ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

Advertisement

Advertisement
Tags :
CentralGOVERNMENTHOMOSEXUALMINISTERಕೇಂದ್ರಕ್ರಿಮಿನಲ್‌ ಕಾನೂನುಸಚಿವಸಂಪುಟಸರ್ಕಾರಸಲಿಂಗಕಾಮ
Advertisement
Next Article