For the best experience, open
https://m.newskannada.com
on your mobile browser.
Advertisement

ಕಾಂಗ್ರೆಸ್ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ವಾಗ್ದಾಳಿ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪ್ಪೂರು ಶ್ರೀರಾಮ ಕ್ಷತ್ರೀಯ ಭವನದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಅಂಗವಾಗಿ ಬೃಹತ್ ನಾರಿ ಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
12:05 PM Apr 20, 2024 IST | Ashika S
ಕಾಂಗ್ರೆಸ್ ಭ್ರಷ್ಟಾಚಾರದ ಕೂಪ  ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ವಾಗ್ದಾಳಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪ್ಪೂರು ಶ್ರೀರಾಮ ಕ್ಷತ್ರೀಯ ಭವನದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಅಂಗವಾಗಿ ಬೃಹತ್ ನಾರಿ ಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

Advertisement

ಸಮಾವೇಶವನ್ನು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕ್ರಿಮಿನಲ್, ಭ್ರಷ್ಟಾಚಾರ ಬೆಂಬಲಿಸುವವರನ್ನು ದೇಶದಾದ್ಯಂತ ಈ ತನಕ ಮುಂದುವರಿಸಿಕೊಂಡು ಬಂದಿದೆ. ಮಹಿಳೆಯರಿಗೆ ಹೆಚ್ಚು ಗೌರವ ತಂದುಕೊಟ್ಟ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಇಲ್ಲಿನ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರನ್ನು ಅವರನ್ನು ಸನ್ಮಾನಿಸಲಾಯಿತು. ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್‌, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ನಾನಾ ಘಟಕದ ಮುಖಂಡರುಗಳಾದ ಉದಯ ಕುಮಾರ್ ಶೆಟ್ಟಿ, ಕಿಶೋ‌ರ್ ಕುಂದಾಪುರ, ಶೀಲಾ ಶೆಟ್ಟಿ, ಶಿಲ್ಪಾ ಸುವರ್ಣ, ಶ್ಯಾಮಲಾ ಕುಂದ‌ರ್, ಬಿ.ಎನ್.ಶಂಕರ್ ಪೂಜಾರಿ, ಕಿರಣ್ ಕುಮಾ‌ರ್, ಬೈಕಾಡಿ ಸುಪ್ರಸಾದ್‌ ಶೆಟ್ಟಿ, ರಾಜೀವ್ ಕುಲಾಲ್‌, ವೀಣಾ ಶೆಟ್ಟಿ ಉಪಸ್ಥಿತರಿದ್ದರು.

Advertisement

Advertisement
Tags :
Advertisement