ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸುವೆ: ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ.
10:00 AM Feb 16, 2024 IST | Ashitha S

ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ.

Advertisement

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಾನು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ.

ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.

Advertisement

ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇದರ ಆಧಾರದ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಉಡುಪಿ ಮತ್ತು ಚಿಕ್ಕಮಗಳೂರು ಜನರು ಆಶೀರ್ವಾದ ಮಾಡಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದರು.

Advertisement
Tags :
GOVERNMENTindiaKARNATAKANewsKannadaSHOBHA KARANDLAJEUDUPIUnionminister
Advertisement
Next Article