For the best experience, open
https://m.newskannada.com
on your mobile browser.
Advertisement

ಕ್ರಿಕೆಟಿಗ ರಿಷಬ್ ಪಂತ್ ಕುರಿತು ನಟಿ ಊರ್ವಶಿ ಸ್ಪಷ್ಟನೆ

ನಟಿ ಊರ್ವಶಿ ರೌಟೇಲಾ ಮತ್ತು ರಿಷಬ್ ಪಂತ್ ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ.
05:26 PM Apr 03, 2024 IST | Ashitha S
ಕ್ರಿಕೆಟಿಗ ರಿಷಬ್ ಪಂತ್ ಕುರಿತು ನಟಿ ಊರ್ವಶಿ ಸ್ಪಷ್ಟನೆ

ಮುಂಬೈ: ನಟಿ ಊರ್ವಶಿ ರೌಟೇಲಾ ಮತ್ತು ರಿಷಬ್ ಪಂತ್ ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ.

Advertisement

"ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ" ಎಂದಿದ್ದಾರೆ.

ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

Advertisement

ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು.

Advertisement
Tags :
Advertisement