ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್‌ ಟ್ರಂಪ್‌ ಗಿಲ್ಲ ಮತದಾನ ಅವಕಾಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಮತದಾನದಿಂದ ಕೊಲರಾಡೋ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದೆ.
10:00 AM Dec 20, 2023 IST | Ashika S

ಕೊಲರಾಡೊ: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಮತದಾನದಿಂದ ಕೊಲರಾಡೋ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದೆ.

Advertisement

2021ರ ಜನವರಿ 6ರಂದು ಅಮೆರಿಕದ ಕ್ಯಾಪಿಟಲ್ ಹಿಲ್‌ ಮೇಲೆ ಅವರ ಬೆಂಬಲಿಗರು ನಡೆಸಿದ ದಾಳಿಯಲ್ಲಿ ಟ್ರಂಪ್‌ ಕುಮ್ಮಕ್ಕಿನ ಹಿನ್ನೆಲೆಯಲ್ಲಿ ಈ ಅನರ್ಹತೆ ಜಾರಿಯಾಗಿದೆ. “ದಂಗೆ ಅಥವಾ ಬಂಡಾಯ”ದಲ್ಲಿ ತೊಡಗಿರುವ ಅಧಿಕಾರಿಗಳ ಅಧಿಕಾರವನ್ನು ನಿರ್ಬಂಧಿಸುವ ಯುಎಸ್ ಸಂವಿಧಾನದ ಅಪರೂಪದ ಒಂದು ನಿಬಂಧನೆಯ ಅಡಿಯಲ್ಲಿ, ಈ ಅನರ್ಹತೆ ಜಾರಿ ಮಾಡಲಾಗಿದೆ. ಅಧ್ಯಕ್ಷರಾಗಿದ್ದೂ ಮತದಾನಕ್ಕೆ ಅನರ್ಹರೆಂದು ಪರಿಗಣಿಸಲಾದ ಮೊದಲ ಅಧ್ಯಕ್ಷೀಯ ಅಭ್ಯರ್ಥಿ ಎಂಬ ಇತಿಹಾಸವನ್ನು ಟ್ರಂಪ್‌ ಸೃಷ್ಟಿಸಿದ್ದಾರೆ.

2024ರಲ್ಲಿ ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನಕ್ಕೆ ಟ್ರಂಪ್‌ ಮುಂಚೂಣಿಯಲ್ಲಿದ್ದಾರೆ. ಆದರೆ US ಸರ್ಕಾರದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸಿದ ಅವರ ಪಾತ್ರದಿಂದಾಗಿ ಮತದಾನದಲ್ಲಿ ಕಾಣಿಸಿಕೊಳ್ಳುವುದನ್ನು US ಸಂವಿಧಾನ ನಿರ್ಬಂಧಿಸುತ್ತದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ.

Advertisement

Advertisement
Tags :
LatetsNewsNewsKannadaಅಧ್ಯಕ್ಷ ಡೊನಾಲ್ಡ್ ಟ್ರಂಪ್ಅಮೆರಿಕಚುನಾವಣೆಬೆಳವಣಿಗೆಮತದಾನಸುಪ್ರೀಂ ಕೋರ್ಟ್
Advertisement
Next Article