ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಒಡಾಟಕ್ಕೆ ಸಜ್ಜು

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಗಳೂರಿನಲ್ಲಿ ಓಡಾಟ ನಡೆಸಲು ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ನಡೆಸಿದೆ.
12:57 PM Dec 26, 2023 IST | Ramya Bolantoor

ಮಂಗಳೂರು: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಗಳೂರಿನಲ್ಲಿ ಓಡಾಟ ನಡೆಸಲು ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ನಡೆಸಿದೆ. ಮಂಗಳೂರು ಮತ್ತು ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಓಡಾಟ ಮಾಡಲಿದೆ.

Advertisement

ಇಂದು (ಮಂಗಳವಾರ) ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ರೈಲು‌ ನಿಲ್ದಾಣದಿಂದ‌ ಈ ಪ್ರಾಯೋಗಿಕ ರೈಲು ಪ್ರಯಾಣ ಆರಂಭಿಸಿದ. ಇದು ಮಧ್ಯಾಹ್ನ 1.45ಕ್ಕೆ ಮಡಗಾಂವ್ ತಲುಪಲಿದೆ. ಇದರಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಈ ರೈಲನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಡಿ.30 ರಂದು ಮಂಗಳೂರು‌ ಮಡಗಾಂವ್ ವಂದೇ ಭಾರತ್ ಎಕ್ಸ್​ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.

Advertisement

320 ಕಿಮೀ ದೂರದ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಗಳೂರು ಸೆಂಟ್ರಲ್, ಉಡುಪಿ, ಕಾರವಾರ, ಮಡಗಾಂವ್​ನಲ್ಲಿ ನಿಲುಗಡೆಯಾಗಲಿದೆ. 4 ಗಂಟೆ ಪ್ರಯಾಣಕ್ಕೆ‌ ಸೀಮಿತವಾಗಿರುವ ಈ ರೈಲಿನಲ್ಲಿ ಕುಳಿತುಕೊಳ್ಳುವ ಆಸನ ವ್ಯವಸ್ಥೆ ಇದೆ. ಆದರೆ, ಸ್ಲೀಪರ್ ಕೋಚ್ ಇರುವುದಿಲ್ಲ. ಮಂಗಳೂರು ಮಡಗಾಂವ್ ರೈಲು ಮಂಗಳೂರು ಸೆಂಟ್ರಲ್​ನಿಂದ ಬೆಳಗ್ಗೆ 8.30ಕ್ಕೆ ಹೊರಟು, ಮಧ್ಯಾಹ್ನ 1.05 ಕ್ಕೆ ಮಡಗಾಂವ್ ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇರಲಿದೆ. ಸಂಜೆ 6.10ಕ್ಕೆ ಮಡಗಾಂವ್​ನಿಂದ ಹೊರಟು ರಾತ್ರಿ‌ 10.45ಕ್ಕೆ ಮಂಗಳೂರು‌ ಸೆಂಟ್ರಲ್ ತಲುಪಲಿದೆ.

Advertisement
Tags :
NewsKannadaಮಂಗಳೂರುವಂದೇ ಭಾರತ್
Advertisement
Next Article