For the best experience, open
https://m.newskannada.com
on your mobile browser.
Advertisement

ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಜಯಪುರ ನಗರದ ಎಸ್‌.ಎಸ್‌. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
05:12 PM Apr 10, 2024 IST | Chaitra Kulal
ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ವಿಜಯಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಜಯಪುರ ನಗರದ ಎಸ್‌.ಎಸ್‌. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Advertisement

ವೇದಾಂತ ನಾವಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವನು. ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ ಎಂದನು.

ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್‌ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು ಎಂದು ವೇದಾಂತ ತಿಳಿಸಿದರು.

Advertisement

Advertisement
Tags :
Advertisement