For the best experience, open
https://m.newskannada.com
on your mobile browser.
Advertisement

ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿದ ಪ್ರಧಾನಿ ಮೋದಿ

ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮಿಳುನಾಡಿನ ಚೆನ್ನೈನಲ್ಲಿ ಭೇಟಿ ಮಾಡಿದ್ದಾರೆ.
11:28 AM Mar 05, 2024 IST | Gayathri SG
ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿದ ಪ್ರಧಾನಿ ಮೋದಿ

ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮಿಳುನಾಡಿನ ಚೆನ್ನೈನಲ್ಲಿ ಭೇಟಿ ಮಾಡಿದ್ದಾರೆ.

Advertisement

ಈ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಈ ವೇಳೆ ಸಿನಿಮಾ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. ‘ಚೆನ್ನೈನಲ್ಲಿ ವೈಜಯಂತಿ ಮಾಲಾ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ. ಅವರು ಪದ್ಮ ವಿಭೂಷಣ ಪ್ರಶಸ್ತಿ ಪಡೆದಿದ್ದಾರೆ ಮತ್ತು ಭಾರತೀಯ ಸಿನಿಮಾ ಜಗತ್ತಿಗೆ ನೀಡಿದ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಜನವರಿಯಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ ವೈಜಯಂತಿಮಾಲಾ ಹೆಸರು ಕೂಡ ಇತ್ತು. ಇವರಲ್ಲದೆ ಚಿರಂಜೀವಿ ಹಾಗೂ ಇನ್ನೂ 132 ಜನರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

Advertisement

Advertisement
Tags :
Advertisement