ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತೂರಿನ ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಇನ್ನಿಲ್ಲ

ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(98) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
12:45 PM Nov 01, 2023 IST | Ramya Bolantoor

ಪುತ್ತೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(98) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ'ವನ್ನು ಕಟ್ಟಿಕೊಂಡು ಸುಮಾರು 13 ವರ್ಷಗಳ ಕಾಲ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಬಳಿಕ ಸುರತ್ಕಲ್ ಮೇಳದಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ ಮತ್ತು ಮಾನ್ಯತೆ ತಂದು ಕೊಟ್ಟಿರುವ ಹಾಸ್ಯ ಕಲಾವಿದರಾದ ಅವರು `ಪಾಪಣ್ಣ ವಿಜಯ' ಪ್ರಸಂಗದಲ್ಲಿ `ಪಾಪಣ್ಣ' ಪಾತ್ರದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಮನ್ನಣೆಯನ್ನು ಗಳಿಸಿದ್ದರು. `ದಮಯಂತಿ ಪುನರ್‌ಸ್ವಯಂವರ' ಪ್ರಸಂಗದಲ್ಲಿ `ಬಾಹುಕ' ಪಾತ್ರ ನಿರ್ವಹಿಸಿ ಪಾತ್ರಕ್ಕೆ ಹೊಸ ರೂಪ ನೀಡಿದ್ದರು. ಪೌರಾಣಿಕ ಪ್ರಸಂಗಗಳಲ್ಲಿ ಬಹುತೇಕ ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದ ಅವರು ತುಳು ಪ್ರಸಂಗಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದ ಕಲಾವಿದ.

Advertisement

ಪದ್ಯಾಣ ಕುಟುಂಬದ ನಾರಾಯಣ ಭಟ್ ಅವರು ತನ್ನ ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡು ಪೆರುವಡಿಯಲ್ಲಿನ ಅಜ್ಜನ ಮನೆಯಲ್ಲಿ ಬೆಳೆದಿದ್ದರು. ಅಲ್ಲಿಯೇ ಯಕ್ಷರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಅದರಿಂದಾಗಿ ಅವರು ಪೆರುವಡಿ ನಾರಾಯಣ ಭಟ್ ಎಂದೇ ಪ್ರಸಿದ್ದರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತಿಮ ಕ್ರಿಯೆ ಬುಧವಾರ ಬೆಳಗ್ಗೆ ಚಿಕ್ಕಪುತ್ತೂರಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Advertisement
Tags :
deathLatestNewsNewsKannadaನಾರಾಯಣ ಭಟ್ಪುತ್ತೂರುಯಕ್ಷಗಾನ
Advertisement
Next Article