ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
07:07 AM May 08, 2024 IST | Nisarga K
ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮಹಿಳೆಯ ನಗ್ನ ಚಿತ್ರ ಸೆರೆ ಕುರಿತು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮೊಬೈಲ್ ರಿಂಗಿಣಿಸಿದ್ದು, ಭದ್ರತಾ ಸಿಬ್ಬಂದಿ ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು.

ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement
Tags :
CASEcollegeLatestNewsmangalurumobileNewsKarnatakaSHOOTtoiletVideo
Advertisement
Next Article