For the best experience, open
https://m.newskannada.com
on your mobile browser.
Advertisement

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್ ತಂಡವನ್ನು ಮಣಿಸಿ ಪ್ಲೇ ಆಫ್​ಗೆ ಪ್ರವೇಶಿಸಿತು. ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್​ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.
03:06 PM May 19, 2024 IST | Nisarga K
ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ
ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಲಂಡನ್​: ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್ ತಂಡವನ್ನು ಮಣಿಸಿ ಪ್ಲೇ ಆಫ್​ಗೆ ಪ್ರವೇಶಿಸಿತು. ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್​ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.

Advertisement

ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ವಿಜಯ್​ ಮಲ್ಯ ಟ್ವೀಟ್​ ಮಾಡಿ, “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದಾರೆ. ಇದೇ ವರ್ಷ ಆರ್​ಸಿಬಿ ಮಹಿಳಾ ತಂಡ ಡಬ್ಲ್ಯುಪಿಎಲ್ ಟೂರ್ನಿಯ ಕಪ್​ ಗೆದ್ದಾಗಲೂ ಕೂಡ ವಿಜಯ್ ಮಲ್ಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.

Advertisement
Advertisement
Tags :
Advertisement