ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ ಹೇಳುತ್ತಾ ಹೊರಟರೆ ಪದಗಳೇ ಸಾಲುವುದಿಲ್ಲ. ತಾಯಿಯ ಅನನ್ಯ ಪ್ರೀತಿಯನ್ನು ವಿವರಿಸಲು ಸಾಧ್ಯವಿಲ್ಲ.
04:39 PM May 12, 2024 IST | Ashitha S

ಬೆಂಗಳೂರು: ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ ಹೇಳುತ್ತಾ ಹೊರಟರೆ ಪದಗಳೇ ಸಾಲುವುದಿಲ್ಲ. ತಾಯಿಯ ಅನನ್ಯ ಪ್ರೀತಿಯನ್ನು ವಿವರಿಸಲು ಸಾಧ್ಯವಿಲ್ಲ.

Advertisement

ಈ ದಿನ ಹಲವಾರು ತಾರೆಯರು ತಮ್ಮ ಅಮ್ಮಂದಿರೊಡನೆ ಫೋಟೋ ಹಂಚಿಕೊಂಡು ಅವರಿಗೆ ಶುಭಾಶಯ ಹೇಳಿದ್ದಾರೆ. ಆದರೆ ನಟ ವಿಜಯ್ ಸೂರ್ಯ ಒಂದು ಹೆಜ್ಜೆ ಮುಂದೆ ಹೋಗಿ, ತಾಯಂದಿರ ದಿನ ಅಮ್ಮನಿಗಾಗಿ ವಿಶೇಷ ಕೆಲಸವನ್ನು ಮಾಡಿದ್ದಾರೆ.

ಅಮ್ಮ ತಮ್ಮ ಮುದ್ದು ಮಗಳನ್ನು ಎತ್ತಿಕೊಂಡು ಹಣೆಗೆ ಕುಂಕುಮವಿಡುತ್ತಿರುವ ಫೋಟೋ ಹಂಚಿಕೊಂಡಿರುವ ನಟ ತಾಯಿಯ ಬಗ್ಗೆ ಒಂದಿಷ್ಟು ಭಾವನೆ ಹಂಚಿಕೊಂಡಿದ್ದಾರೆ.

Advertisement

ಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ..
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ..
ಎಂ ಆರ್ ಕಮಲಾ ಅವರು ಬರೆದ ಈ ಸಾಲನ್ನು ಮನದಲ್ಲಿ ನೆನೆಯುತ್ತಾ ಅಮ್ಮನಿಗೊಂದು ಭಾವುಕ ನಮನ ಸಲ್ಲಿಸುತ್ತೇನೆ. Happy Mother’s Day Amma ಎಂದಿದ್ದಾರೆ ವಿಜಯ್‌ಸೂರ್ಯ.
ಇಷ್ಟು ಹೇಳಿದರೆ ಸಾಕಾ ? ಅಮ್ಮ ಪ್ರತಿ ಕ್ಷಣದ ಮಿಡಿತ ಅಲ್ವಾ ? ಈ ಪ್ರಶ್ನೆ ನನ್ನನ್ನು ಸದಾ ಕಾಡಿದೆ. ಇದಕ್ಕೆ ಉತ್ತರ ಹುಡುಕಲು ಹೊರಟಾಗ ಅನ್ನಿಸಿದ್ದು ನನ್ನ ಹೆಸರಿನಲ್ಲಿ ಅಮ್ಮನ ಹೆಸರು ಬೆರೆತರೆ ಹೇಗೆ ಎಂಬ ಭಾವ. ಅದನ್ನು ಅಳವಡಿಸಿಕೊಳ್ಳಲು ಅಮ್ಮಂದಿರ ದಿನಕ್ಕಿಂತ ವಿಶೇಷ ಸಂದರ್ಭ ಯಾವುದಿದೆ ಅಲ್ವಾ ಎಂದು ಕೇಳಿರುವ ನಟ ಇಂದಿನಿಂದ ನಾನು ನನ್ನ ಹೆಸರನ್ನು *ವಿಜಯ್ ಲಲಿತಾ ಸೂರ್ಯ* ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು ಎಂದು ಹೇಳಿದ್ದಾರೆ.

https://www.instagram.com/p/C63Q7ZHPL31/?hl=en

Advertisement
Tags :
LatestNewsmothers dayNewsKarnatakaSANDALWOODvijaysuriya
Advertisement
Next Article