For the best experience, open
https://m.newskannada.com
on your mobile browser.
Advertisement

ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಇಂದು ಬಿಜೆಪಿ ಸೇರಿದ್ದಾರೆ.
04:02 PM Apr 03, 2024 IST | Ashitha S
ಲೋಕಸಭೆ ಚುನಾವಣೆ  ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

ನವದೆಹಲಿ: ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಇಂದು ಬಿಜೆಪಿ ಸೇರಿದ್ದಾರೆ.

Advertisement

ವಿಜೇಂದರ್ ಸಿಂಗ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಮಥುರಾ ಕ್ಷೇತ್ರದಿಂದ ನಟಿ ಮತ್ತು ಹಾಲಿ ಸಂಸದೆ ಹೇಮಾ ಮಾಲಿನಿ ವಿರುದ್ಧ 38ರ ಹರೆಯದ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸಿತ್ತು. ಆದರೆ ವಿಜೇಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್ ಶಿಪ್ ಮತ್ತು 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದರು.

Advertisement

Advertisement
Tags :
Advertisement