ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ನಿರ್ಧರಿಸಿದ ವಿನೇಶ್ ಫೋಗಟ್

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಂಗಳವಾರ ಘೋಷಿಸಿದ್ದಾರೆ.
10:34 PM Dec 26, 2023 IST | Gayathri SG

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ತಮ್ಮ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಂಗಳವಾರ ಘೋಷಿಸಿದ್ದಾರೆ.

Advertisement

ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ ‘ಪ್ರಭಾವಿ’ಗಳಿಗೆ ಧನ್ಯವಾದಗಳು, ”ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬಹಿರಂಗ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ‘ನಿಷ್ಠಾವಂತ’ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ಪ್ರತಿಭಟಿಸಿ ಬಜರಂಗ್ ಪುನಿಯಾ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀಯನ್ನು ಹಿಂದಿರುಗಿಸಿದ್ದಾರೆ. ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದ ಕೆಲವು ದಿನಗಳ ನಂತರ ಫೋಗಟ್ ಅವರ ಘೋಷಣೆ ಬಂದಿದೆ.

Advertisement

Advertisement
Tags :
LatestNewsNewsKannadaಅರ್ಜುನ ಪ್ರಶಸ್ತಿಖೇಲ್ ರತ್ನ
Advertisement
Next Article