ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ತಡೆ

ಪುತ್ತೂರಿನಲ್ಲಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿತಾಗಿದೆ. 
10:46 AM Mar 25, 2024 IST | Ashitha S

ಮಂಗಳೂರು:  ಪುತ್ತೂರಿನಲ್ಲಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿತಾಗಿದೆ.

Advertisement

ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.

ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ .

Advertisement

ಈ ವೇಳೆ ಕಾರು ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದಾಗ ಕಾರು ಚರಂಡಿಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ಗೋವುಗಳಿಗೆ ನೀರು ಮೇವು ನೀಡಿ ಬಜರಂಗದಳದ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದಾರೆ.

Advertisement
Tags :
crimeGOVERNMENTindiaKARNATAKALatestNewsಬಜರಂಗದಳಮಂಗಳೂರು
Advertisement
Next Article