ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ಕಿಂಗ್​ ಕೊಹ್ಲಿ

2024ರ ಐಪಿಎಲ್​ಗೆ ಮಾರ್ಚ್​ 22ರಂದು ವರ್ಣರಂಜಿತ ಚಾಲನೆ ದೊರೆತ್ತಿದ್ದು, 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​ಕಿಂಗ್ಸ್​ ಎದುರು ಸೋಲಿನ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತನ್ನ ಅಭಿಯಾನವನ್ನು ಆರಂಭಿಸಿದೆ.
07:48 AM Mar 23, 2024 IST | Ashitha S

ದೆಹಲಿ: 2024ರ ಐಪಿಎಲ್​ಗೆ ಮಾರ್ಚ್​ 22ರಂದು ವರ್ಣರಂಜಿತ ಚಾಲನೆ ದೊರೆತ್ತಿದ್ದು, 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​ಕಿಂಗ್ಸ್​ ಎದುರು ಸೋಲಿನ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತನ್ನ ಅಭಿಯಾನವನ್ನು ಆರಂಭಿಸಿದೆ.

Advertisement

ಆದರೆ ರನ್​ ಮೆಷಿನ್ ಎಂದೇ ಖ್ಯಾತಿ ಪಡೆದಿರುವ​ ವಿರಾಟ್​ ಕೊಹ್ಲಿ ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಒಂದನ್ನು ಬರೆದಿದ್ದಾರೆ. ಈ ಮೂಲಕ ಟಿ-20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 6 ರನ್ ಕಲೆಹಾಕಿದ ಕೂಡಲೇ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Advertisement

360 ಟಿ-20 ಇನ್ನಿಂಗ್ಸ್​ ಆಡಿರುವ ವಿರಾಟ್​ ಕೊಹ್ಲಿ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್​ಮನ್​ ಆಗಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೈರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಇದ್ದಾರೆ. ಆದರೆ, ಅತಿ ವೇಗವಾಗಿ 12000 ರನ್ ಪೂರೈಸಿದ ವಿಚಾರಕ್ಕೆ ಬರುವುದಾದರೆ ವಿರಾಟ್ ಎರಡನೇ ಸ್ಥಾನದಲ್ಲಿದ್ದಾರೆ.

Advertisement
Tags :
CSKindiaIPL2024LatestNewsNewsKannadaRECORDviratನವದೆಹಲಿ
Advertisement
Next Article