ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಾಖಲೆಗಳ ಸರದಾರ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು.
10:43 AM May 05, 2024 IST | Ashitha S

ಬೆಂಗಳೂರು: ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು.

Advertisement

ಈ 42 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 12500 ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾದರು.
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ (14562 ರನ್ಸ್​), ಪಾಕಿಸ್ತಾನದ ಶೊಯೆಬ್ ಮಲಿಕ್ (13360), ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (12900) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9355 ಎಸೆತಗಳನ್ನು ಎದುರಿಸಿ 12536 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್​​ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

Advertisement

ಇನ್ನು ಈ 42 ರನ್​ಗಳೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.

 

 

Advertisement
Tags :
cricketindiaIPL 2024LatestNewsNewsKarnatakaRCBvirat
Advertisement
Next Article