For the best experience, open
https://m.newskannada.com
on your mobile browser.
Advertisement

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 
01:59 PM May 17, 2024 IST | Chaitra Kulal
ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ.

Advertisement

ಪಾಕ್​ ಪರ್ವತಾರೋಹಿ ಶೆಹ್ರೋಜ್​ ಕಾಶಿಫ್​ ಅವರು ಟೀಂ ಇಂಡಿಯಾದ ಸ್ಫೋಟಕ ಆಟಗಾರ ಕೊಹ್ಲಿ ಅವರನ್ನು ವಿಡಿಯೋ ಕಾಲ್​ನಲ್ಲಿ ಭೇಟಿಯಾದರು.

ಇಬ್ಬರು ಸಂಭಾಷಣೆ ನಡೆಸಿದ್ದು,  ಈ ವೇಳೆ ಕೊಹ್ಲಿ ‘ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ. ಈಗಾಗಲೇ ಎಲ್ಲೂ ಭೇಟಿ ನೀಡಲು ಪ್ರಾರಂಭಿಸಿದ್ದಾರೆ’ ಎಂದು ಹೇಳಿದ್ದಾರೆ. ಅದಕ್ಕೆ ಶೆಹ್ರೋಜ್​ ಕಾಶಿಫ್​ ನಿಮಗೆ ಸದಾ ತೆರೆದಿರುತ್ತದೆ ಎಂದು ಹೇಳಿದ್ದಾರೆ.

Advertisement

ಶೆಹ್ರೋಜ್​ ಕಾಶಿಫ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಕೊಹ್ಲಿ ಜೊತೆಗಿನ ವಿಡಿಯೋ ಸಂಭಾಷಣೆಯನ್ನು ಹಂಚಿಕೊಂಡಿದ್ದಾರೆ. 2022ರಲ್ಲಿ ನೇಪಾಳದಲ್ಲಿರುವ ಭಾರತೀಯ ಪ್ರಜೆಯ ಮೂಲಕ ಕೊಹ್ಲಿ ಸಂಪರ್ಕ ಮಾಡಲು ಸಾಧ್ಯವಾಯಿತು ಎಂದಿದ್ದಾರೆ. ಆದರೆ ರಾಜಕೀಯ ವಿಚಾರವಾಗಿ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅವರ ಹೆಸರು ಹೇಳಲು ಕಾಶಿಫ್​ ಹಿಂದೇಟು ಹಾಕಿದ್ದಾರೆ.

ಶೆಹ್ರೋಜ್​ ಕಾಶಿಫ್, ತಮಾಷೆಯಾಗಿ ಭಾರತೀಯ ಮೂಲದ ವ್ಯಕ್ತಿ ಜೊತೆ ಕೊಹ್ಲಿಯೊಂದಿಗೆ ಮಾತನಾಡಬೇಕು ಎಂದು ಹೇಳಿದ್ದರಂತೆ. ಆದರೆ ಅವರು ಸಂಪರ್ಕ ಸಾಧಿಸಲು ಸಹಾಯ ಮಾಡಿದರು. ಪಾಕಿಸ್ತಾನದವನಾಗಿರುವ ನಾನು ಕೊಹ್ಲಿಯನ್ನು ಶ್ರೇಷ್ಠ ಬ್ಯಾಟ್ಸ್​ಮನ್​ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳಿದ್ದಾರೆ.

Advertisement
Tags :
Advertisement