For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆ: ತೇಜಸ್ವಿ ಸೂರ್ಯ ಅವರಿಗೆ ವಿಶ್ವಕರ್ಮ ಸಮುದಾಯದ ಬೆಂಬಲ

ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ - ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್ ಕುಮಾರ್ ತಿಳಿಸಿದ್ದಾರೆ.
07:18 AM Apr 18, 2024 IST | Ashika S
ಲೋಕಸಭಾ ಚುನಾವಣೆ  ತೇಜಸ್ವಿ ಸೂರ್ಯ ಅವರಿಗೆ ವಿಶ್ವಕರ್ಮ ಸಮುದಾಯದ ಬೆಂಬಲ

ಬೆಂಗಳೂರು: ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ - ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಜೆ.ಡಿ.ಎಸ್ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಬೆಂಬಲಿಸಿ  ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ, ವಿಶ್ವಕರ್ಮ ನಾಡೋಜ ಡಾ. ಬಿ. ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಜಾಗೃತ ಮತದಾನ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ಬಾರಿ ತೇಜಸ್ವಿ ಸೂರ್ಯ ಗೆಲುವು ಸಾಧಿಸಲಿದ್ದಾರೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು. ಸಭೆ ಉದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ ಅವರು ಎಲ್ಲರೂ ಖಡ್ಡಾಯವಾಗಿ ಮತ ಚಲಾಯಿಸಬೇಕು. ತಮ್ಮನ್ನು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸಬೇಕು. ಸಮುದಾಯದ ಹಿತ ರಕ್ಷಣೆಗೆ ತಾವು ಬದ್ಧ ಎಂದರು.

Advertisement

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಮಸ್ತ ವಿಶ್ವಕರ್ಮ ಜನಾಂಗದವರು, ಹಾಗೂ ಹಿತೈಷಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬಸವನಗುಡಿ ಶಾಸಕರಾದ ಶ್ರೀ ರವಿ ಸುಬ್ರಮಣ್ಯ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಪಿ.ಎಂ ವಿಶ್ವಕರ್ಮ ಯೋಜನೆ ಸಂಚಾಲಕ ಕೆ.ಚಂದ್ರಶೇಖರ್ ಆಚಾರಿ, ಬಸವನಗುಡಿ ಜೆಡಿಎಸ್ ಅಧ್ಯಕ್ಷ ಎಂ.ರಾಜು,  ವಿಶ್ವಕರ್ಮ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್, ಸಮುದಾಯದ ಮುಖಂಡರಾದ  ನಂಜುಂಡಸ್ವಾಮಿ, ಶಿಲ್ಪಿ ಹೊನ್ನಪ್ಪಚಾರ್, ಮಧುಸೂದನ್, ಬಾಲಾಜಿ,  ಜಿ. ಶಂಕರ್,  ಸಂತೋಷ್ ಪತ್ತಾರ್, ಮತ್ತು ಬಿ.ಜೆ.ಪಿ, ಜೆ.ಡಿ.ಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Tags :
Advertisement