ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗೋಡೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿದು ಒಟ್ಟು ಆರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಘೋಸಿಯಲ್ಲಿ ನಡೆದಿತ್ತು. 
11:01 AM Dec 10, 2023 IST | Ashika S

 ಘೋಸಿ: ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿದು ಒಟ್ಟು ಆರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಘೋಸಿಯಲ್ಲಿ ನಡೆದಿತ್ತು.

Advertisement

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.

ಮೃತರನ್ನು ಪೂನಂ ಶರ್ಮಾ(42), ಮೀರಾ(36), ಪೂಜಾ (35), ಚಂದಾ ದೇವಿ (30), ಸುಶೀಲಾ (52), ಲಾಲ್ತಿ (60), ಅನ್ವಿಯಾ (4) ಮತ್ತು ಮಾಧವ್ (8) ಎಂದು ಗುರುತಿಸಲಾಗಿದೆ.

Advertisement

ಗಾಯಗೊಂಡ ಇತರ 20 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಎಲ್ಲಾ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.

Advertisement
Tags :
LatetsNewsNewsKannadaಕಾರ್ಯಕ್ರಮಗೋಡೆಮಹಿಳೆಮೃತವಿವಾಹ
Advertisement
Next Article