ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ನೀರಿಗೆ ಪರದಾಟ: ಶೌಚಕ್ಕೆ ಮಾಲ್‌ಗೆ ಹೋಗುತ್ತಿರುವ ಜನ

ನಗರದಲ್ಲಿ ನೀರಿಲ್ಲದೆ ಜನರು ಪರದಾಡುವಂತೆ ಆಗಿದೆ. ದಿನ ನಿತ್ಯದ ಯಾವುದೇ ಕಾರ್ಯಕ್ಕೂ ನೀರಿನ ಅವಶ್ಯಕತೆ ಇದೆ. ಹೆಚ್ಚು ಜನಸಂಖ್ಯೆ ಹೊಂದಿರುವ ನಗರದಲ್ಲಿ ನೀರಿನ ಕೊರತೆ ಉಂಟಾಗಿದೆ. ಹೀಗಾಗಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಹೇಳಲಾಗುತ್ತಿತ್ತು ಆದರೆ ಈಗ ಮಿತವಾಗಿ ಬಳಸಲು ನೀರಿಲ್ಲದಂತೆ ಆಗಿದೆ.
11:05 AM Mar 09, 2024 IST | Nisarga K
ಬೆಂಗಳೂರಿನಲ್ಲಿ ನೀರಿಗೆ ಪರದಾಟ: ಶೌಚಕ್ಕೆ ಮಾಲ್‌ಗೆ ಹೋಗುತ್ತಿರುವ ಜನ

ಬೆಂಗಳೂರು:  ನಗರದಲ್ಲಿ ನೀರಿಲ್ಲದೆ ಜನರು ಪರದಾಡುವಂತೆ ಆಗಿದೆ. ದಿನ ನಿತ್ಯದ ಯಾವುದೇ ಕಾರ್ಯಕ್ಕೂ ನೀರಿನ ಅವಶ್ಯಕತೆ ಇದೆ. ಹೆಚ್ಚು ಜನಸಂಖ್ಯೆ ಹೊಂದಿರುವ ನಗರದಲ್ಲಿ ನೀರಿನ ಕೊರತೆ ಉಂಟಾಗಿದೆ. ಹೀಗಾಗಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಹೇಳಲಾಗುತ್ತಿತ್ತು ಆದರೆ ಈಗ ಮಿತವಾಗಿ ಬಳಸಲು ನೀರಿಲ್ಲದಂತೆ ಆಗಿದೆ.

Advertisement

ಟ್ಯಾಂಕಲ್ಲೂ ಇಲ್ಲ, ಸಂಪಲ್ಲೂ ಇಲ್ಲ, ಕುಡಿಯೋಕೂ ನೀರಿಲ್ಲ, ತೊಳೆಯೋಕೂ ನೀರಿಲ್ಲ, ಬೆಂಗಳೂರಿನಲ್ಲಿ ನೀರಿಲ್ಲಂದತ್ತಾಗಿದೆ. ನಗರದಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ಮಧ್ಯೆ ಜನರು ಶೌಚಾಲಯಗಳನ್ನು ಬಳಸಲು ಹತ್ತಿರದ ಮಾಲ್‌ಗಳಿಗೆ ಹೋಗುತ್ತಿದ್ದಾರೆ ಎಂದು ನಗರದ ನಿವಾಸಿಯೊಬ್ಬರು ಹೇಳಿದ್ದಾರೆ. ಜನರು ಸ್ನಾನ ಮಾಡಲು ಜಿಮ್‌ಗಳಿಗೆ ಹೋಗುತ್ತಿದ್ದಾರೆ ಎಂದು ಮತ್ತೋರ್ವ ವ್ಯಕ್ತಿ ಹೇಳಿರುವುದಾಗಿ ವರದಿ ಆಗಿದೆ. ಒಂದು ತಿಂಗಳಿಂದ ತಮಗೆ ನಿಯಮಿತ ನೀರು ಸರಬರಾಜು ಮಾಡಿಲ್ಲ ಎಂದು ಪ್ರೆಸ್ಟೀಜ್ ಫಾಲ್ಕನ್ ಸಿಟಿಯ ಫ್ಲಾಟ್‌ನಲ್ಲಿ ವಾಸಿಸುತ್ತಿರುವ ನಿವಾಸಿ ಹೇಳಿದ್ದಾರೆ.

ಪ್ರೆಸ್ಟೀಜ್ ಫಾಲ್ಕನ್ ಸಿಟಿಯ ಜನರು 1 ಕೋಟಿ ರೂ. ಇಎಂಐ ಪಾವತಿಸುತ್ತಿದ್ದಾರೆ. ಆದರೆ ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ. ಕಾರಣ ನೀರಿಲ್ಲ. ನಾವು ಎಲ್ಲಿಗೆ ಬಂದಿದ್ದೇವೆ? ಇದಕ್ಕೆ ನಿಮ್ಮ ದೀರ್ಘಾವಧಿಯ ಪರಿಹಾರವೇನು? ಸೂಕ್ತ ನೀರಿಲ್ಲದ ಫ್ಲಾಟ್​ಗಳ ಖರೀದಿಸುವುದನ್ನು ನಿಲ್ಲಿಸಿ ಎಂದು ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ಗೆ ಮನವಿ ಮಾಡಿದ್ದಾರೆ.

Advertisement

ಹೆಚ್ಚಿನ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರೆ, ಇತರರು ತಾತ್ಕಾಲಿಕ ವಸತಿಗಳಿಗೆ ತೆರಳಿದ್ದಾರೆ. ನೀರಿಲ್ಲದ ಪರಿಣಾಮ ಶೌಚಾಲಯಗಳು ಸ್ವಚ್ಚಗೊಳಿಸದಿರುವುದರಿಂದ ಗಬ್ಬು ವಾಸನೆ ಬರುತ್ತಿವೆ. ಹೀಗಾಗಿ ಜನರು ತಮ್ಮ ನಿತ್ಯಕರ್ಮಗಳನ್ನು ಮಾಡಲು ಹತ್ತಿರದ ಮಾಲ್‌ಗೆ ಹೋಗುತ್ತಿರುವುದು ಸಾಮಾನ್ಯವಾಗಿದೆ ಎಂದು ನಿವಾಸಿಯೊಬ್ಬರು ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನು ಕೆಲ ಜನರು ಬಟ್ಟೆ ಮತ್ತು ಟವೆಲ್ ಜೊತೆಗೆ ಜಿಮ್‌ಗಳಿಗೆ ತೆರಳುತ್ತಿದ್ದು, ಇಲ್ಲಿಯೇ ಸ್ನಾನ ಮಾಡಿ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಟ್ಯಾಂಕರ್ ನೀರಿನ ಮೇಲೆ ಅವಲಂಬಿತವಾಗಿರುವ ಫ್ಲಾಟ್‌ಗಳನ್ನು ಖರೀದಿಸದಂತೆ ಫ್ಲಾಟ್‌ ನಿವಾಸಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈಗಂತು ಬೆಂಗಳೂರಿನಲ್ಲಿ ಅಸ್ಸಾಂನ ಪರಿಸ್ಥಿತಿ ಬಂದೊದಗಿದೆ. ಅದೆಷ್ಟರ ಮಟ್ಟಿಗೆ ಅಂದರೆ ಖುದ್ದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಟ್ಯಾಂಕರ್ ಮೂಲಕ ನೀರು ಹರಿಸಲಾಗುತ್ತಿದೆ. ಇಷ್ಟೊಂದು ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ಜನ ಪರದಾಡುತ್ತಿದ್ದಾರೆ. ಅದ್ರಲ್ಲೂ ಯಶವಂತಪುರ ಕ್ಷೇತ್ರದ ತಿಪ್ಪೇನಹಳ್ಳಿಯಲ್ಲಿ ಜನರಂತೂ ಹಬ್ಬದ ದಿನವೂ ಜೀವ ಜಲಕ್ಕಾಗಿ ಬೀದಿಗಿಳಿದಿದ್ದರು.

ದೊಡ್ಡಬಿದರಕಲ್ಲು ವಾರ್ಡ್ ವ್ಯಾಪ್ತಿಯಲ್ಲಿರೋ ತಿಪ್ಪೇನಹಳ್ಳಿಯಲ್ಲಿ 15 ದಿನಕ್ಕೊಮ್ಮೆ ನೀರು ಬರ್ತಿದೆಯಂತೆ. ಹೀಗಾಗಿ ರಸ್ತೆಯಲ್ಲಿ ಹೋಗ್ತಿದ್ದ ಖಾಸಗಿ ವಾಟರ್ ಟ್ಯಾಂಕರ್ ತಡೆದು ಸ್ಥಳೀಯರು ನೀರು ತುಂಬಿಸಿಕೊಂಡಿದ್ದಾರೆ. ಬಿಂದಿಗೆ, ಕ್ಯಾನ್​ಗಳಲ್ಲಿ ಸ್ಥಳೀಯರು ನೀರು ಕೊಂಡೊಯ್ದಿದ್ದಾರೆ. ಜನರ ಆಕ್ರೋಶಕ್ಕೆ ವಾಟರ್ ಟ್ಯಾಂಕರ್ ಚಾಲಕ ಕಕ್ಕಾಬಿಕ್ಕಿಯಾದ ಘಟನೆ ನಡೆಯಿತು.

Advertisement
Tags :
bengaluruLatestNewsmallNewsKannadaScarcitySHORTAGEtoiletWATER
Advertisement
Next Article