For the best experience, open
https://m.newskannada.com
on your mobile browser.
Advertisement

ಮೋದಿ ಎನ್ನುತ್ತೇವೆ ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ ಎಂದು ತಂಗಡಗಿಗೆ ಕಾರ್ಯಕರ್ತರ ಸವಾಲ್

ಲೋಕಸಭೆ ಚುನಾವಣೆ ದಿನ ಹತ್ತಿರ ಬರುತ್ತಿದ್ದಂತೆ ರಾಜಕೀಯ ಆರೋಪ ಪ್ರತ್ಯಾರೋಪಗಳು ಹೆಚ್ಚುತ್ತಿದೆ. ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳೂ ಸುದ್ದಿಯಾಗುತ್ತಿದ್ದು, ಇದೀಗ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದರು.
07:01 PM Mar 25, 2024 IST | Chaitra Kulal
ಮೋದಿ ಎನ್ನುತ್ತೇವೆ ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ ಎಂದು ತಂಗಡಗಿಗೆ ಕಾರ್ಯಕರ್ತರ ಸವಾಲ್

ಬೆಂಗಳೂರು: ಲೋಕಸಭೆ ಚುನಾವಣೆ ದಿನ ಹತ್ತಿರ ಬರುತ್ತಿದ್ದಂತೆ ರಾಜಕೀಯ ಆರೋಪ ಪ್ರತ್ಯಾರೋಪಗಳು ಹೆಚ್ಚುತ್ತಿದೆ. ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳೂ ಸುದ್ದಿಯಾಗುತ್ತಿದ್ದು, ಇದೀಗ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದರು.

Advertisement

ಈ ಹೇಳಿಕೆ ಇದೀಗ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, “ನಾವು ಮೋದಿ ಎನ್ನುತ್ತೇವೆ, ನಮಗೆ ಹೊಡೆಯಿರಿ ಬನ್ನಿ” ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಶೇರ್ ಮಾಡಿ ಸವಾಲು ಹಾಕಿದ್ದಾರೆ. ಯುವಕರು ಮೋದಿ, ಮೋದಿ ಎಂದರೆ ಕಪಾಳಕ್ಕೆ ಹೊಡಿಯಬೇಕು ಎನ್ನುವ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಬಿಜೆಪಿ ತಿರುಗಿ ಬಿದ್ದಿದ್ದು, ಬಿಜೆಪಿ ಕಾರ್ಯಕರ್ತರು ಈ ಸಂಬಂಧ ಈಗ ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಈಗ ಬಿಜೆಪಿ ಕಾರ್ಯಕರ್ತರು ವಾಟ್ಸಪ್‌ ಸ್ಟೇಟಸ್‌ಗಳಲ್ಲಿ ಈ ಪೋಸ್ಟರ್‌ಗಳನ್ನು ಹಾಕಿಕೊಳ್ಳುತ್ತಿದ್ದು, , ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Advertisement

Advertisement
Tags :
Advertisement