ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿ ಕಾರ್ಯಕರ್ತರ ಕಾನೂನು ರಕ್ಷಣೆಗೆ ಕಂಟ್ರೋಲ್‌ ರೂಂ ಓಪನ್‌ ಮಾಡ್ತೀವಿ ಎಂದ ವಿಜಯೇಂದ್ರ

ಕಾಂಗ್ರೆಸ್‌ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡಿ ಕೇಸ್‌ ಫಿಕ್ಸ್‌ ಮಾಡುತ್ತಿದೆ ಎಂಬ ಆರೋಪವಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕರ್ತರ ರಕ್ಷಣೆಗೆ ಕಂಟ್ರೋಲ್‌ ರೂಂ ಓಪನ್‌ ಮಾಡುವುದಾಗಿ ಹೇಳಿದ್ದಾರೆ.
02:35 PM Nov 26, 2023 IST | Ashika S

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡಿ ಕೇಸ್‌ ಫಿಕ್ಸ್‌ ಮಾಡುತ್ತಿದೆ ಎಂಬ ಆರೋಪವಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕರ್ತರ ರಕ್ಷಣೆಗೆ ಕಂಟ್ರೋಲ್‌ ರೂಂ ಓಪನ್‌ ಮಾಡುವುದಾಗಿ ಹೇಳಿದ್ದಾರೆ.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ.

Advertisement

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು.

Advertisement
Tags :
LatetsNewsNewsKannadaಕಂಟ್ರೋಲ್‌ ರೂಂಕಾಂಗ್ರೆಸ್ಟಾರ್ಗೆಟ್ಬಿಜೆಪಿರಾಜ್ಯಾಧ್ಯಕ್ಷವಿಜಯೇಂದ್ರಸರ್ಕಾರ
Advertisement
Next Article