For the best experience, open
https://m.newskannada.com
on your mobile browser.
Advertisement

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
07:30 AM May 05, 2024 IST | Nisarga K
ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು   ಉಳಿದೆಡೆ ಗುಡುಗು ಸಹಿತ ಮಳೆ
ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

Advertisement

Advertisement
Tags :
Advertisement