For the best experience, open
https://m.newskannada.com
on your mobile browser.
Advertisement

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ. ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ನಾನು ಯಾರ ಹೆಸರನ್ನೂ ಹೇಳಲ್ಲ. ಆದ್ರೆ ಯಾರೆಲ್ಲ ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. 
03:05 PM May 18, 2024 IST | Ashika S
ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ  ಹೆಚ್ ಡಿ ದೇವೇಗೌಡ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ. ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ನಾನು ಯಾರ ಹೆಸರನ್ನೂ ಹೇಳಲ್ಲ. ಆದ್ರೆ ಯಾರೆಲ್ಲ ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

Advertisement

ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಜೆಪಿ ನಗರ ಲಕ್ಷ್ಮಿ-ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕಣದಲ್ಲಿ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ಪ್ರಕರಣ ಕೋರ್ಟ್‌ನಲ್ಲಿ ಇರೋದ್ರಿಂದ ನಾನು ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದು ಹೇಳಿದ್ದಾರೆ.

Advertisement

ಈ ಪ್ರಕರಣದಲ್ಲಿ ಯಾರೆಲ್ಲಾ ಅಪಾಯಕ್ಕೆ ಸಿಲುಕಿದ್ದಾರೋ ಆ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು, ಜನತೆಗೆ ನ್ಯಾಯ ಸಿಗಬೇಕು ಎಂದು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ನಮಗೆ ಯಾವುದೇ ತಕರಾರು ಇಲ್ಲ. ಆದ್ರೆ ರೇವಣ್ಣ ಬಗ್ಗೆ ಮಾಡಿರೋ ಕೇಸ್ ಬಗ್ಗೆ ರಾಜ್ಯದ ಜನತೆ ನೋಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Advertisement
Tags :
Advertisement