ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆಯಾಗಲಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಬೆಳಗಿನ ಜಾವ ಮಂಜು ಆವರಿಸಿಲಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.
08:07 AM Dec 23, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಬೆಳಗಿನ ಜಾವ ಮಂಜು ಆವರಿಸಿಲಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

Advertisement

ಬೆಳಗ್ಗೆ ಹಾಗೂ ಸಂಜೆ ಹೊತ್ತು ಥಂಡಿ ಚಳಿ ಇರಲಿದೆ. ಕೆಲವೊಮ್ಮೆ ಜೋರಾಗಿ ಗಾಳಿ ಬೀಸಲಿದೆ. ಉಳಿದಂತೆ ಕರಾವಳಿ‌ಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಬಿಸಿಲಿನ ವಾತಾವರಣ ಇರಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಕೆಲವೊಂದು ಜಿಲ್ಲೆಗಳಲ್ಲಿ ಉಷ್ಣಾಂಶ ಕಡಿಮೆ ಆಗಲಿದೆ.

Advertisement

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಯಾವುದೇ ಮಳೆ ಸೂಚನೆ ಇಲ್ಲ.

Advertisement
Tags :
LatetsNewsNewsKannadaಕೊಡಗುಮಂಜುಮಳೆರಾಜ್ಯ
Advertisement
Next Article