For the best experience, open
https://m.newskannada.com
on your mobile browser.
Advertisement

ಬೆಂಗಳೂರಿನ ಯಾವೆಲ್ಲಾ ಶಾಲೆಗಳಿಗೆ ಉಗ್ರವಾದ ಬಗ್ಗೆ ಬಾಂಬ್ ಬೆದರಿಕೆ ಬಂದಿದೆ: ಪಟ್ಟಿ ಇಲ್ಲಿದೆ

ಗರದಲ್ಲಿ  ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್ ಬಂದಿತ್ತು.
01:49 PM Dec 01, 2023 IST | Ramya Bolantoor
ಬೆಂಗಳೂರಿನ ಯಾವೆಲ್ಲಾ ಶಾಲೆಗಳಿಗೆ ಉಗ್ರವಾದ ಬಗ್ಗೆ  ಬಾಂಬ್ ಬೆದರಿಕೆ ಬಂದಿದೆ   ಪಟ್ಟಿ ಇಲ್ಲಿದೆ

Advertisement

ಬೆಂಗಳೂರು:  ನಗರದಲ್ಲಿ  ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್ ಬಂದಿತ್ತು. ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವೆಲ್ಲಾ ಶಾಲೆಗಳಿಗೆ ಬಾಂಬ್​ ಬೆದರಿಕೆ ಹಾಕಲಾಗಿದೆ ಎನ್ನುವ ಪಟ್ಟಿ ಇಲ್ಲಿದೆ.

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 44 ಶಾಲೆಗಳಿಗೆ ಇಮೇಲ್ ಬೆದರಿಕೆ ಬಂದಿದೆ.

Advertisement

ಯಾವ ವಯಲದಲ್ಲಿ ಎಷ್ಟು ಶಾಲೆಗಳಿಗೆ ಬೆದರಿಕೆ?
ಬೆಂಗಳೂರಿನ ಉತ್ತರ ವಲಯ -1ರಲ್ಲಿ 4 ಶಾಲೆಗಳಿಗೆ
ಬೆಂಗಳೂರಿನ ಉತ್ತರ ವಲಯ – 2ರಲ್ಲಿ 2 ಶಾಲೆಗಳಿಗೆ
ಬೆಂಗಳೂರಿನ ಉತ್ತರ ವಲಯ -4: 01 ಶಾಲೆ.
ಬೆಂಗಳೂರಿನ ದಕ್ಷಿಣ ವಲಯ – 1: 15 ಶಾಲೆಗಳಿಗೆ ಬೆದರಿಕೆ ಇಮೇಲ್​ಬೆಂಗಳೂರಿನ ದಕ್ಷಿಣ ವಲಯ – 2: 03 ಶಾಲೆಗಳು. ಬೆಂಗಳೂರಿನ ದಕ್ಷಿಣ ವಲಯ – 3: 10 ಶಾಲೆಗಳು ಬೆಂಗಳೂರಿನ ದಕ್ಷಿಣ ವಲಯ 4: 04 ಶಾಲೆಗಳು

ಬನ್ನೇರುಘಟ್ಟದ 7 ಶಾಲೆಗಳಿಗೆ ಬಾಂಬ್ ಬೆದರಿಕೆ
ಗ್ರೀನ್ ಹುಡ್ ಹೈಸ್ಕೂಲ್, ದಿನ್ನೇಪಾಳ್ಯ
ಗ್ಲೋಬಲ್ ಇಂಟರ್ನ್ಯಾಷನಲ್ ಶಾಲೆ
ರಾಯನ್ ಇಂಟರ್ನ್ಯಾಷನಲ್ ಶಾಲೆ
ಆಲ್ ಬಷೀರ್ ಶಾಲೆ
ದೀಕ್ಷಾ ಹೈಟ್‌ ಶಾಲೆ
ಕಾಂಡರ್ ಇಂಟರ್ನ್ಯಾಷನಲ್ ಶಾಲೆ
ಬಿವಿಎಂ ಗ್ಲೋಬಲ್ ಶಾಲೆ

ಹೆಬ್ಬಗೋಡಿಯ ನಾಲ್ಕು ಶಾಲೆಗಳಿಗೆ ಹುಸಿಬಾಂಬ್
ಡಿವೈನ್ ಇಂಟರ್ನ್ಯಾಷನಲ್ ಶಾಲೆ
ಟ್ರೀಮೈಸ್‌ ಇಂಟರ್ನ್ಯಾಷನಲ್ ಶಾಲೆ
ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ
ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ

ಸರ್ಜಾಪುರದ ಐದು ಶಾಲೆಗಳಿಗೆ ಬಾಂಬ್ ಬೆದರಿಕೆ
ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್
ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ
ಓಕರಿಡ್ಜ್ ಶಾಲೆ
ಟಿ ಐ ಎಸ್ ಬಿ ಶಾಲೆ
ಇನ್ವೆಂಚರ್ ಅಕಾಡೆಮಿ

ಜಿಗಣಿಯ ಎರಡು ಶಾಲೆಗಳಿಗೆ ಹುಸಿ ಬಾಂಬ್
ಅಚೀವರ್ಸ್ ಅಕಾಡೆಮಿ
ಎನ್ಡೆವರ್ಸ್ ಅಕಾಡೆಮಿ
ಅನೇಕಲ್​ನ 05 ಶಾಲೆಗಳಿಗೆ ಸೇರಿದಂತೆ ಒಟ್ಟು 44 ಖಾಸಗಿ ಶಾಲೆಗಳ ಇಮೇಲ್​ಗೆ ಬಾಂಬ್​ ಬೆದರಿಕೆ ಬಂದಿದೆ.

ಬಾಂಬ್‌ ಬೆದರಿಕೆ ಕುರಿತು ಮಾತನಾಡಿದ ಆರ್‌ ಆಶೋಕ್‌ , ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ​ ಜತೆ ಮಾತನಾಡಿದ್ದೇನೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಇ-ಮೇಲ್ ಪತ್ರದಲ್ಲಿ​ ಉಲ್ಲೇಖಿಸಿದ್ದಾರೆ. ಧರ್ಮಾಧರಿತವಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದೆ. ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗಳಿಗೆ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

15 ಶಾಲೆಗಳಿಗೆ ಬಾಂಬ್ ಬೆದರಿಕೆ: ಆಘಾತಕಾರಿ ವಿಚಾರ ಬಿಚ್ಚಿಟ್ಟ ಸುರೇಶ್ ಕುಮಾರ್

Advertisement
Tags :
Advertisement