For the best experience, open
https://m.newskannada.com
on your mobile browser.
Advertisement

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ.
02:41 PM May 19, 2024 IST | Ashika S
ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ  ಕಂಗನಾ ರಣಾವತ್

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ.

Advertisement

ಟಿವಿ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ, ಕಂಗನಾ ಮಂಡಿಯನ್ನು ಗೆದ್ದರೆ ಮುಂದಿನ ಯೋಜನೆಗಳೇನು ಎಂದು ಕೇಳಿದಾಗ, ನನಗೆ ಚಲನಚಿತ್ರ ನಿರ್ಮಾಪಕರು ಸಾಕಷ್ಟು ಮಂದಿ ಹೇಳಿದ್ದಾರೆ ನೀನು ಉತ್ತಮ ನಟಿ, ರಾಜಕೀಯಕ್ಕೆ ಹೋಗಬೇಡಿ ಇಲ್ಲೇ ಇರು ಎಂದು ಆದರೆ ನಾನು ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗದಿಂದ ಹೊರಬರುತ್ತೇನೆ ಎಂದರು.

ಕಳೆದ ಮಂಗಳವಾರ ಕಂಗನಾ ಚುನಾವಣೆಗೆ ಮಂಡಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಸಂಪೂರ್ಣ ಸಮಯವನ್ನು ಪ್ರಚಾರಕ್ಕಾಗಿ ಮೀಸಲಿಟ್ಟಿದ್ದು, ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.

Advertisement

ಹಿಮಾಚಲ ಪ್ರದೇಶದಲ್ಲಿ ಮತದಾನದ ಮೊದಲು, ನಟಿ ತನ್ನ 91 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಹಿರಂಗಪಡಿಸಿದರು. ಇದರಲ್ಲಿ ಆಭರಣಗಳು, ಕಾರುಗಳು ಮತ್ತು ಸ್ಥಿರ ಆಸ್ತಿಗಳು ಸೇರಿವೆ. ಆಕೆಯ ಸಾಲವೂ 17 ಕೋಟಿ ರೂ. ಇದೆ.

Advertisement
Tags :
Advertisement